
ಲಿಂಗಸುಗೂರು : ಜನರ ಆರೋಗ್ಯ ಕಾಪಾಡಬೇಕಾದ ನರ್ಸ್ ಒಬ್ಬರು ಮತ್ತೊಬ್ಬ ನಸ್೯ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಚಪ್ಪಲಿಯಲ್ಲಿ ಹೊಡೆದ ಘಟನೆ ಈಚನಾಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರುಗಿದೆ.
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ಟಾಪ್ ನರ್ಸ್ ಆಗಿರುವ ದೀಪಾ ಎಂಬುವ ನಸ್೯ ಜಾತಿ ನಿಂದನೆ ಮಾಡಿ ಜ್ಯೋತಿ ಎಂಬ ಸ್ಟಾಫ್ ನರ್ಸ್ ಮೇಲೆ ಹಲ್ಲೆ ಮಾಡಿ ಚಪ್ಪಲಿಯಿಂದ ಹೊಡೆದಿದ್ದಾರೆ. ತಮ್ಮ ಕರ್ತವ್ಯದಲ್ಲಿ ಅಡ್ಜಸ್ಟ್ಮೆಂಟ್ ಆಗಲಿಲ್ಲ ಎಂಬ ಕಾರಣಕ್ಕಾಗಿ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾರೆ.
ಸದ್ಯ ಈ ಕುರಿತು ವಿಡಿಯೋ ವೈರಲ್ ಆಗಿದ್ದು ತಾಲೂಕ ಆರೋಗ್ಯ ಅಧಿಕಾರಿಗಳ ಗಮನಕ್ಕೆ ಬಂದರು ಯಾವುದೇ ಕ್ರಮ ಆಗಿಲ್ಲ ಎಂಬುದು ಸ್ಥಳೀಯರ ಅಸಮಾಧಾನವಾಗಿದೆ. ಕೂಡಲೇ ಈ ಸ್ಟಾಪ್ ನಸ೯ ಅನ್ನು ವರ್ಗಾವಣೆ ಅಥವಾ ಸಸ್ಪೆಂಡ್ ಮಾಡಬೇಕೆಂದು ಗ್ರಾಮಸ್ಥರು ಸೇರಿ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ.
![]() |
![]() |
![]() |
![]() |
![]() |
[ays_poll id=3]