This is the title of the web page
This is the title of the web page
State News

ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ 24 ಗಂಟೆ ಕೆಲಸ ಮಾಡಿ : ಸಿಎಂ ತಾಕೀತು


ರಾಯಚೂರು : ಮುಂಗಾರು ಆರಂಭವಾದರೂ ರಾಯಚೂರು ಜಿಲ್ಲೆಯಲ್ಲಿ ಮಳೆಯ ಕೊರತೆ ಎದುರಾಗಿದೆ. ಇದರಿಂದ ನೀರಿನ ಸಮಸ್ಯೆ ತೀವ್ರತರದಲ್ಲಿ ತಲೆದೋರಲು ಕೊರತೆ ಇರುವ ಕಡೆಗಳಲ್ಲಿ ತ್ವರಿತಗತಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಅಧಿಕಾರಿಗಳು 24 ಗಂಟೆಯೂ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಆಡಳಿತಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮಳೆ ಕೊರತೆ ಮತ್ತು ಕುಡಿಯುವ ನೀರಿನ ಸಮಸ್ಯೆಯ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ರಾಯಚೂರು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿ ಮಾಹಿತಿ ಪಡೆದರು. ರಾಜ್ಯದಲ್ಲಿ ಜೂನ್‌ 10ರಂದೇ ಮುಂಗಾರು ಆರಂಭವಾಗಿದೆ. ಆದರೆ, ಜೂನ್‌ 1 ರಿಂದ 11 ರವರೆಗಿನ ಮಾಹಿತಿಯ ಪ್ರಕಾರ ರಾಜ್ಯದ ವಾಡಿಕೆ ಮಳೆಗಿಂತ ಶೇ 67 ರಷ್ಟು ಕೊರತೆ ಆಗಿದೆ. ಮುಂದಿನ ದಿನಗಳಲ್ಲಿ ವಾಡಿಕೆಯಷ್ಟು ಮಳೆ ಆಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ. ಪರಿಸ್ಥಿತಿ ನಿಭಾಯಿಸಲು ಜಿಲ್ಲಾಡಳಿತ ಸಜ್ಜಾಗಬೇಕು ಎಂದರು.

ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಕೊರತೆ ಇರದಿದ್ದರೂ ಕಲುಷಿತ ನೀರಿನ ಸಮಸ್ಯೆ ಉಂಟಾಗಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಇದರ ವರದಿಯನ್ನು ಆಧರಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯದರ್ಶಿಯವರಿಗೆ ಸೂಚಿಸಲಾಗಿದೆ ಎಂದು ಹೇಳಿದರು.


[ays_poll id=3]