ರಾಯಚೂರು : ವಿಶ್ವ ಏಡ್ಸ್ ದಿನದ ಅಂಗವಾಗಿ ನಗರದ ಬಿ.ಆರ್.ಬಿ ವೃತ್ತದಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿವರೆಗೆ “ಸಮನ್ವಯಗೊಳಿಸು ನಮ್ಮೆಲ್ಲರ ಪ್ರಾಮಾಣಿಕ ಪ್ರಯತ್ನದಿಂದ ಅಸಮಾನತೆಯನ್ನು ಪರಿಹರಿಸೋಣ ಮತ್ತು ಏಡ್ಸ್ ಅನ್ನು ಕೊನೆಗೊಳಿಸೋಣ” ಎಂಬ ಘೋಷವಾಕ್ಯದಡಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು.
ಜಿಲ್ಲಾ ಕಾನೂನು ಸೆವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೋಲಿಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಏಡ್ಸ್ ತಡೆ ಮತ್ತು ನಿಯಂತ್ರಣ ಘಟಕ, ರಿಮ್ಸ್ ಆಸ್ಪತ್ರೆ, ನವೋದಯ ಆಸ್ಪತ್ರೆ, ಜಿಲ್ಲೆಯ ರಕ್ತ ನಿಧಿ ಕೇಂದ್ರಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಗರದ ಬಿ.ಆರ್.ಬಿ ವೃತ್ತದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದಯಾನಂದ. ಎಮ್. ಬೇಲೂರೆ, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು.
ಜಾಥವು ಬಿ.ಆರ್.ಬಿ ವೃತ್ತದಿಂದ ನೇತಾಜಿ ವೃತ್ತ, ಸರಫ್ ಬಜಾರ್, ತೀನ್ ಕಂದಿಲ್ ವೃತ್ತದ ಮೂಲಕ ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ಇಲಾಖೆ ಕಚೇರಿ ವರೆಗೆ ಜರುಗಿತು. ತೀನ್ ಕಂದಿಲ್ ವೃತ್ತ ಸೇರಿದಂತೆ ವಿವಿಧ ವೃತ್ತಗಳಲ್ಲಿ ಏಡ್ಸ್ ತಡೆಗಟ್ಟುವ ಕುರಿತು ವಿವಿಧ ಸಂಘ ಸಂಸ್ಥೆಗಳು, ಕಾಲೇಜು ವಿದ್ಯಾರ್ಥಿಗಳು ಬೀದಿ ನಾಟಕಗಳ ಮೂಲಕ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಂದ್ರ ಬಾಬು, ಜಿಲ್ಲಾ ಶಸ್ತç ಚಿಕಿತ್ಸಕ ಡಾ. ವಿಜಯ್ ಶಂಕರ್, ಜಿಲ್ಲಾ ಏಡ್ಸ್ ಮತ್ತು ಕ್ಷಯ ರೋಗ ನಿಯಂತ್ರಣ ಅಧಿಕಾರಿ ಡಾ. ಮಹ್ಮದ್ ಶಾಕೀರ್ ಮೊಹಿನುದ್ದೀನ್, ಆರ್.ಸಿ.ಹೆಚ್ ಅಧಿಕಾರಿ ಡಾ. ನಂದಿತಾ ಸೇರಿದಂತೆ ಇನ್ನೀತರ ಅಧಿಕಾರಿಗಳು ವೈದ್ಯಕೀಯ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
![]() |
![]() |
![]() |
![]() |
![]() |
[ays_poll id=3]