
K2 ನ್ಯೂಸ್ ಡೆಸ್ಕ್ : ಬಿಎಡ್ ಪದವಿ ಪಡಿದವರು ಪ್ರಾಥಮಿಕ ತರಗತಿಗಳಿಗೆ ಬೋಧನೆಗೆ ಅಗತ್ಯವಾದ ಮೂಲಭೂತ ಶಿಕ್ಷಣದ ಮಿತಿಯನ್ನು ಹೊಂದಿರುವುದಿಲ್ಲ. ಹಾಗಾಗಿ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಬಿ.ಎಡ್ ಪದವಿಯನ್ನು ಪಡೆದಿರುವವರು ಅರ್ಹರಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಅನಿರುದ್ಧ ಬೋಸ್ ಹಾಗೂ ನ್ಯಾಯಮೂರ್ತಿ ಸುಧಾಂಶು ದುಲಿಯಾ ಅವರನ್ನೊಳಗೊಂಡ ಪೀಠವು, ಭಾರತೀಯ ಸಂವಿಧಾನದ 21ಎ ಮತ್ತು ಶಿಕ್ಷಣ ಹಕ್ಕು ಕಾಯಿದೆ 2009ರ ಅಡಿಯಲ್ಲಿ ಭಾರತದಲ್ಲಿ ಪ್ರಾಥಮಿಕ ಶಿಕ್ಷಣ ಮೂಲಭೂತ ಹಕ್ಕನ್ನು ಖಾತರಿಪಡಿಸುತ್ತದೆ. ಇದು 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕಡ್ಡಾಯ ಮತ್ತು ಗುಣಮಟ್ಟದ ಶಿಕ್ಷಣವನ್ನು ಒಳಗೊಂಡಿದೆ ಎಂದು ಅಭಿಪ್ರಾಯ ಪಟ್ಟಿದೆ.
ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಪ್ರಾಥಮಿಕ ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಲು ಸಾಧ್ಯವಾಗುವುದಿಲ್ಲ ಎಂಬುದಾಗಿ ಅಭಿಪ್ರಾಯ ಪಟ್ಟಿದೆ. ಈ ಹಿನ್ನಲೆಯಲ್ಲಿ ಬಿಎಡ್ ಪದವೀಧರರು 1 ರಿಂದ 5ನೇ ತರಗತಿಗೆ ಬೋಧನೆ ಮಾಡಲು ಅರ್ಹರಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡುವ ಮೂಲಕ, ರಾಜಸ್ಥಾನ ಹೈಕೋರ್ಟ್ ಈ ಸಂಬಂಧ ನೀಡಿದ್ದ ತೀರ್ಪನ್ನು ಎತ್ತಿ ಹಿಡಿದಿದೆ.
![]() |
![]() |
![]() |
![]() |
![]() |
[ays_poll id=3]