K2kannadanews.in
Crime News ರಾಯಚೂರು : ಗ್ರಾಮದ ಹೊರ ವಲಯದಲ್ಲಿರುವ ಕಾಲುವೆಗೆ, ಬಟ್ಟೆ ತೊಳೆಯಲು ಹೋಗಿದ್ದ ತಾಯಿ ಮಗಳು ನಾಪತ್ತೆಯಾದ ಘಟನೆ ಡಿ ಯದ್ಲಾಪುರ ಗ್ರಾಮದಲ್ಲಿ ನಡೆದಿದೆ.
ರಾಯಚೂರು ತಾಲೂಕಿನ ಬಿ.ಯದ್ಲಾಪೂರ ಗ್ರಾಮದಲ್ಲಿ ನಡೆದಿದೆ. ತಾಯಿ ಸುಜಾತಾ (27) ಹಾಗೂ ಮಗಳು ಶ್ರಾವಣಿ (10) ನಾಪತ್ತೆಯಾಗಿದ್ದಾರೆ. ಬೆಳಿಗ್ಗೆ ಮನೆಯಲ್ಲಿನ ಬಟ್ಟೆಗಳನ್ನು ತೆಗೆದುಕೊಂಡು ತೊಳೆಯಲು ಕಾಲುವೆಗೆ ಬಂದಿದ್ದರು. ಈ ವೆಳೆ ಕಾಲುವೆಯಲ್ಲಿ ಕಾಲು ಜಾರಿ ಕೊಚ್ಚಿ ಹೋಗಿರುವ ಶಂಕಿಸಲಾಗಿದೆ.
ಇನ್ನೂ ತುಂಬಾ ಹೊತ್ತಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಬಂದು ಹುಡುಕಾಟ ನಡೆಸಿದಾಗ ಸ್ಥಳದಲ್ಲಿ ಕಂಡಿಲ್ಲ. ಹಾಗಾಗಿ ಕೂಡಲೇ ಗ್ರಾಮಸ್ಥರನ್ನು ಕರೆದು ಶೋಧಕಾರ್ಯ ಆರಂಭಿಸಿದ್ದಾರೆ. ಯಾವುದೇ ಸುಳಿವು ಸಿಗದೇ ಇದ್ದಾಗ ಪೊಲೀಸರಿಗೆ ಮತ್ತು ಅಗ್ನಿಶಾಮಕ ಸಿಬ್ಬಂದಿಗಳಿಗೆ ಮಾಹಿತಿ ನೀಡಲಾಗಿತ್ತು. ತಾಯಿ-ಮಗಳಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧಕಾರ್ಯ ಆರಂಭಿಸಿದ್ದಾರೆ. ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.