This is the title of the web page
This is the title of the web page
State News

ಕಾಂಗ್ರೆಸ್ ಅನಿಷ್ಟ ಸರ್ಕಾರ ಸಿಎಂ ಬಸವರಾಜ್ ಬೊಮ್ಮಾಯಿ


K2 ನ್ಯೂಸ್ ಡೆಸ್ಕ್ : ಸಿದ್ದರಾಮಯ್ಯ ಅವರು ಮುಖ್ಯ ಮಂತ್ರಿ ಮಾಡಲು ಮತ ಹಾಕಿ ಎಂದು ಯಾಚಿಸುತ್ತಾರೆ. ಜನರು ಅವರ 5 ವರ್ಷಗಳ ಆಡಳಿತ ನೋಡಿದ್ದಾರೆ. ಕಾಂಗ್ರೆಸ್ ಅನಿಷ್ಟ ಸರ್ಕಾರ. ಭ್ರಷ್ಟಾಚಾರದಿಂದ ಕೂಡಿದ ಸರ್ಕಾರ. ಯಾವುದೇ ಇಲಾಖೆ ತೆಗೆದುಕೊಂಡರೂ ಭ್ರಷ್ಟಾಚಾರ ಮಾಡಿದ್ದಾರೆ. ಎಂದು ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದಾಗ ಅನ್ನಭಾಗ್ಯದಲ್ಲಿ ಕನ್ನಭಾಗ್ಯ ಮಾಡಿದ್ದಾರೆ. 30 ರೂ. ನರೇಂದ್ರ ಮೋದಿಯವರು ಕೊಟ್ಟಿದ್ದಾರೆ. 3 ರೂ.ಗಳ ಚೀಲದ ಮೇಲೆ ಸಿದ್ದರಾಮಯ್ಯ ಫೋಟೋ ಹಾಕಿದ್ದಾರೆ. ನಿಜವಾದ ಅನ್ನದಾತ ನರೇಂದ್ರ ಮೋದಿಯವರು. ಕರೊನಾ ಬಂದಾಗ ಗರೀಬ್ ಕಲ್ಯಾಣ ಯೋಜನೆ ಜಾರಿ ಮಾಡಿ ಮುಂದಿನ ವರ್ಷಕ್ಕೂ ಯೋಜನೆ ವಿಸ್ತರಣೆ ಆಗಿದೆ. ಪ್ರತಿ ಬಡವನಿಗೆ 5 ಕೆಜಿ ಅಕ್ಕಿ ನೀಡುವ ನಿರ್ಣಯವನ್ನು ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ಮಾಡಿದ್ದಾರೆ ಎಂದರು.

ಎಲ್ಲಾ ವರ್ಗಗಳಿಗೂ ನ್ಯಾಯ ನೀಡಲು ಪ್ರಾಮಾಣಿಕ ಪ್ರಯತ್ನ : ನಮ್ಮ ಸರ್ಕಾರ ರೈತ ವಿದ್ಯಾ ನಿಧಿ ಯೋಜನೆಯಡಿ 10.ಲಕ್ಷಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳಿಗೆ ಯೋಜನೆಯಿಂದ ಲಾಭ ದೊರೆತಿದೆ. ಕುಶಲಕರ್ಮಿಗಳಿಗೆ 50 ಸಾವಿರ ರೂ.ಗಳ ಸಹಾಯಧನ ನೀಡುವ ಕಾಯಕ ಯೋಜನೆ, ಸ್ತ್ರೀ ಸಾಮರ್ಥ್ಯ, ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ ರೂಪಿಸಿದೆ.

ಸಾಮಾಜಿಕ ನ್ಯಾಯ ನೀಡುತ್ತಿರುವುದು ಭಾಜಪ . ಎಸ್.ಸಿ.ಎಸ್.ಟಿ ಮೀಸಲಾತಿ ಹೆಚ್ಚಿಸಿದೆ. ಹಿಂದುಳಿದ ವರ್ಗಗಳಿಗೂ ಸಾಮಾಜಿಕ ನ್ಯಾಯ ಒದಗಿಸುತ್ತಿದೆ. ಎಲ್ಲಾ ವರ್ಗಗಳಿಗೂ ನ್ಯಾಯ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಈ ಬಾರಿ ಕಾಂಗ್ರೆಸ್ ಹಾಗೂ ಜೆಡಿಎಸ್ ನ ಕಪ್ಳು ಬಿಳುಪು ಸಿನಿಮಾ ನೋಡಿಯಾಗಿದೆ. ಈ ಭಾಗದ ಅಭಿವೃದ್ಧಿಗೆ ಏನಾದರೂ ಕೊಡುಗೆ ಕೊಟ್ಟಿದ್ದಾರೆ ಅದು ನಮ್ಮ ಯಡಿಯೂರಪ್ಪನವರು. ಅವರ ಜನ್ಮಭೂಮಿಯ ಸಮಗ್ರ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಿದ್ದಾರೆ. ಬಿಜೆಪಿ ಈ ಭಾಗವನ್ನು ಸುವರ್ಣ ಕರ್ನಾಟಕವನ್ನಾಗಿಸುವ ಸಂಕಲ್ಪ ಮಾಡಿದೆ.

ಈ ಭಾಗದ ಕಾವೇರಿಯ ಮಕ್ಕಳ ಬಾಳನ್ನು ಬಂಗಾರ ಮಾಡಲು ಸಂಕಲ್ಪವನ್ನು ಮಾಡಿದ್ದೇವೆ. ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಕೆಲಸ ಮಾಡುವುದಾಗಿ ಭರವಸೆ ನೀಡಿದರು. ನವ ಕರ್ನಾಟಕ ದಿಂದ ನವ ಭಾರತ ಕಟ್ಟೋಣ ಎಂದು ಕರೆ ನೀಡಿದರು.

ಕರ್ನಾಟಕದಲ್ಲಿ ಭಾಜಪ ಗಾಳಿ ಬೀಸುತ್ತಿದೆ. ಅಮಿತ್ ಶಾ ಅವರು ಕಾಲಿಟ್ಟ ಮೇಲೆ ಸುನಾಮಿಯಾಗಿ 2023 ರ ಚುನಾವಣೆಯಲ್ಲಿ ಜಯಭೇರಿ ಬಾರಿಸುವುದು ಶತಸಿದ್ದ ಎಂದರು.

ವಿಶ್ವಮಾನ್ಯತೆ : ಭಾರತದ ಚುಕ್ಕಾಣಿ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಭಾರತವನ್ನು ಅತ್ಯಂತ ಶಕ್ತಿ ಶಾಲಿ ರಾಷ್ಟವನ್ನಾಗಿಸಿದೆ. ಪ್ರಗತಿಪರ ರಾಷ್ಟವಾಗಿಸಿ, ಆಂತರಿಕ ಭದ್ರತೆ ಒದಗಿಸಿ ಅಮಿತ್ ಶಾ ಅವರ ಪರಿಶ್ರಮದಿಂದ ಅಖಂಡತೆ, ಏಕತೆಯಲ್ಲಿ ವಿಶ್ವಮಾನ್ಯತೆ ಪಡೆದಿದೆ. ನರೇಂದ್ರ ಮೋದಿಯವರು ವಿಶ್ವಮಾನ್ಯ ನಾಯಕರು. ಭಾರತದ ಕಾಶ್ಮೀರ, ನಕ್ಸಲರು ಸೇರಿದಂತೆ ಹಾಗೂ ಹಲವಾರು ಸಮಸ್ಯೆಗಳನ್ನು ಅತ್ಯಂತ ದಕ್ಷತೆಯಿಂದ ಬಗೆಹರಿಸಿ ದೇಶಕ್ಕೆ ಅಖಂಡತೆ ಹಾಗೂ ಏಕತೆಯನ್ನು ತಂದುಕೊಟ್ಟು ದೇಶದ ನೆಚ್ಚಿನ ಗೃಹ ಸಚಿವರಾಗಿ ಕೆಲಸ ಮಾಡುತ್ತಿದ್ದಾರೆ. ಅಮಿತ್ ಶಾ ಅವರು ಚುನಾವಣೆ ತಂತ್ರವನ್ನು ಹೆಣೆದಲ್ಲಿ ಯಶಸ್ಸು ದೊರೆತಿದೆ. ಗುಜರಾತಿನಲ್ಲಿ ಅಭೂತಪೂರ್ವ ವಿಜಯ ಭಾಜಪ ಗೆದ್ದಿರುವುದು ಅಮಿತ್ ಶಾ ಮತ್ತು ನರೇಂದ್ರ ಮೋದಿಯವರ ಕಾರಣದಿಂದಾಗಿ. ಕರ್ನಾಟಕದ ಚುನಾವಣೆಯಲ್ಲಿಯೂ ಭಾಜಪ ಗೆಲ್ಲುವುದು ಸೂರ್ಯ ಹುಟ್ಟುವಷ್ಟೇ ಸತ್ಯ ಎಂದರು.

ಜನ ಬೇಸತ್ತಿದ್ದಾರೆ : ದಕ್ಷಿಣ ಕರ್ನಾಟಕದಲ್ಲಿ ಜನರ ನಾಡಿ ಮಿಡಿತ ನಮಗೆ ತಿಳಿದಿದೆ. ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಆಡಳಿತದಿಂದ ಜನ ಬೇಸತ್ತಿದ್ದಾರೆ. ಮತಗಳನ್ನು ಪಡೆದು ಮಂತ್ರಿ , ಮುಖ್ಯಮಂತ್ರಿಗಳಾಗಿ ಈ ಭಾಗಕ್ಕೆ ನ್ಯಾಯ ಕೊಡಲು ವಿಫಲರಾಗಿದ್ದಾರೆ. ಈ ಭಾಗದ ನೀರಾವರಿ ಬಗ್ಗೆ ದಿಟ್ಟ ಕ್ರಮಗಳನ್ನು ತೆಗೆದುಕೊಂಡಿಲ್ಲ. ಸಕ್ಕರೆ ಕಾರ್ಖಾನೆ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಹೀಗಾಗಿ ರೈತಾಪಿ ವರ್ಗ, ಯುವಕರು ಮತ್ತು ಮಹಿಳೆಯರು ಭಾಜಪ ಕಡೆ ನೋಡುತ್ತಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಅತ್ಯಧಿಕ ಸ್ಥಾನ ಪಡೆಯುವುದು ಭಾಜಪ ಎಂದರು.


[ays_poll id=3]