
K2 ಪೊಲಿಟಿಕಲ್ ನ್ಯೂಸ್ : ನಿನ್ನ ಎಷ್ಟೇ ನೂತನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ 8 ಜನ ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ಬುಧವಾರದ ವರೆಗೂ ಖಾತೆ ಹಂಚಿಕೆ ಮಾಡದಂತೆ ಸೂಚನೆ ನೀಡಿದೆ.
ಪ್ರಮಾಣ ವಚನ ಸ್ವೀಕರಿಸಿರುವ ಎಂಟು ಮಂದಿ ಸಚಿವರಿಗೆ ಖಾತೆ ಹಂಚಿಕೆಯಾಗದ ಹಿನ್ನೆಲೆಯಲ್ಲಿ ಭಾರೀ ಆತಂಕ ಶುರುವಾಗಿದೆ. ಪ್ರಬಲ ಖಾತೆಗೆ ಲಾಬಿ ಕೂಡ ಶುರು ಮಾಡಿದ್ದಾರೆ. ಮೂಲಗಳ ಪ್ರಕಾರ, ಬುಧವಾರದವರೆಗೆ ಯಾವುದೇ ಸಚಿವರಿಗೆ ಖಾತೆಯನ್ನು ಹಂಚಿಕೆ ಮಾಡದಂತೆ ಹೈಕಮಾಂಡ್ ರಾಜ್ಯ ನಾಯಕರಿಗೆ ಸೂಚನೆ ನೀಡಿದೆ. ಉಳಿದ ಸುಮಾರು 20 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ ಬಳಿಕವಷ್ಟೇ ಯಾವುದೇ ಗೊಂದಲವಾಗದ ರೀತಿಯಲ್ಲಿ ಖಾತೆ ಹಂಚಿಕೆ ಮಾಡಬೇಕೆಂದು ಹೈಕಮಾಂಡ್ ಸೂಚಿಸಿರುವುದಾಗಿ ವರದಿಯಾಗಿದೆ.
![]() |
![]() |
![]() |
![]() |
![]() |
[ays_poll id=3]