This is the title of the web page
This is the title of the web page
Local News

BJP ಬೂತ್ ವಿಜಯ ಅಭಿಯಾನ ಕಾರ್ಯಕ್ರಮ


ಸಿರವಾರ : ಮುಂಬರುವ 2023ರ ವಿಧಾನ ಸಭಾ ಚುನಾವಣೆಯಲ್ಲಿ ಮಾನ್ವಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಪಕ್ಷದ ಪ್ರತಿಯೊಬ್ಬರು ಒಗ್ಗಟ್ಟಿನಿಂದ ಶ್ರಮಿಸೋಣ ಎಂದು ಬಿಜೆಪಿಯ ಮಂಡಲ ಅಧ್ಯಕ್ಷರಾದ ಮಲ್ಲಿಕಾರ್ಜುನ ಜಕ್ಕಲದಿನ್ನಿ ಕರೆ ನೀಡಿದರು.

ಪಟ್ಟಣದ ಸಿರವಾರ ಪಟ್ಟಣದ ಬಸವೇಶ್ವರ ಕಾಲೇಜಿನಲ್ಲಿ ನಡೆದ ಜಿಲ್ಲಾ ಪಂಚಾಯತ್ ಮಟ್ಟದ ಬೂತ್ ವಿಜಯ ಅಭಿಯಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರತಿಯೊಂದು ಜನಪರ ಕಾರ್ಯಕ್ರಮಗಳನ್ನು ಮನೆ ಮನೆಗೆ ಕೊಂಡೊಯ್ಯುವುದರ ಜೊತೆಗೆ ನಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ನಾವೆಲ್ಲರೂ ಒಂದಾಗಿ ಶ್ರಮಿಸೋಣ ಎಂದು ತಿಳಿಸಿದರು.


60
Voting Poll