
K2 ಪೊಲಿಟಿಕಲ್ ನ್ಯೂಸ್: ಆಡಳಿತದಲ್ಲಿರುವ ಬಿಜೆಪಿ ಪಕ್ಷಕ್ಕೆ ಒಂದು ಕಡೆ ಕಾಂಗ್ರೆಸ್ ಮತ್ತೊಂದು ಕಡೆ ಜೆಡಿಎಸ್ ಹಿಗ್ಗ ಮುಗ್ಗ ತರಾಟಗೆ ತೆಗೆದುಕೊಳ್ಳುತ್ತಿವೆ. ಆರೋಪಗಳ ಸುರಿಮಳೆ ಮಾಡುತ್ತಿವೆ. ಬಿಜೆಪಿ ಪಕ್ಷಕ್ಕೆ ರೈತರ ಬಗ್ಗೆ ಸಂಪೂರ್ಣ ನಿರ್ಲಕ್ಷವಿದೆ ಎಂದು ಜೆಡಿಎಸ್ ಆರೋಪಿಸಿದೆ.
ಸಮಸ್ಯೆಗಳ ಸುಳಿಗೆ ಸಿಕ್ಕ ರೈತನಿಗೆ, ಬೆಂಗಾವಲಾಗಿ ನಿಲ್ಲಬೇಕಿದ್ದ ರಾಜ್ಯ ಸರ್ಕಾರ ಗಾಢ ನಿದ್ದೆಯಲ್ಲಿದೆ ಎಂದು ಜೆಡಿಎಸ್ ಕಿಡಿಕಾರಿದೆ. ಕಳೆದ ಎಂಟು ತಿಂಗಳ ಅವಧಿಯಲ್ಲಿ ತೊಗರಿ ಬೆಳೆಯುವ 61 ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಹೊರಬಂದಿದೆ. ರೈತರ ಬದುಕು, ಕೃಷಿಯ ಬಗ್ಗೆ ಉದಾಸೀನ ತೋರುವ ರಾಜ್ಯ ಬಿಜೆಪಿ ಸರ್ಕಾರದ ಬಳಿ ಈ ಬಗ್ಗೆ ಏನಿದೆ ಉತ್ತರ?. ಕೇಂದ್ರ-ರಾಜ್ಯದ ಡಬಲ್ ಎಂಜಿನ್ ಸರ್ಕಾರಗಳು ಈ ಮಟ್ಟದ ನಿರ್ಲಕ್ಷ್ಯ ತೋರಿರುವುದು ಅಮಾನವೀಯ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.
![]() |
![]() |
![]() |
![]() |
![]() |
[ays_poll id=3]