
K2 ಪೊಲಿಟಿಕಲ್ ನ್ಯೂಸ್ : ಸಮಾನ ಅವಕಾಶಗಳಿಂದ ನೆಮ್ಮದಿ ಶಾಂತಿಯಿಂದ, ಸರ್ವಜನಾಂಗದ ಶಾಂತಿಯ ತೋಟವನ್ನು ಸೃಷ್ಟಿಸುವ ಮೂಲಕ ರಾಜ್ಯದಲ್ಲಿ ಕಟ್ಟುತ್ತೇವೆಂಬ ನಂಬಿಕೆಯಿಂದ ಜನರು ಕಾಂಗ್ರೆಸ್ ನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಜ್ಯದ ಜನರು ಯಾವತ್ತು ಬಿಜೆಪಿಯವರಿಗೆ ಆರ್ಶೀವಾದ ಮಾಡಿಲ್ಲ. ಅವರು ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದು, ಮ್ಯಾಂಡೇಟ್ ಇಲ್ಲದೆ ಆಡಳಿತ ನಡೆಸಿದ್ದಾರೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರನ್ನು ಕರೆಸಿ ರೋಡ್ ಶೋ ಮಾಡಿಸುವುದು ಮತ್ತು ನಡ್ಡಾರವರು ನರೇಂದ್ರ ಮೋದಿಯವರನ್ನು ನೋಡಿ ಮತ ನೀಡಿ ಎಂದರೂ ಜನ ಮತ ನೀಡಲಿಲ್ಲ ಎಂದರು. ಇನ್ನು ಮುಂದೆ ಪ್ರಧಾನಿ ಮೋದಿಯವರ ಮೇಲೆ ಅವಲಂಬಿತರಾಗಬೇಡಿ. ಅವರು ಬಂದ ಕಡೆಯಲೆಲ್ಲಾ ಬಿಜೆಪಿ ಸೋತಿದೆ. 1980 ರಲ್ಲಿ ಜನತಾ ಲೋಕದಳದಿಂದ ಲೋಕಸಭಾ ಸ್ಪರ್ಧಿಯಾಗಿದ್ದೆ. ಆ ಸಂದರ್ಭದಲ್ಲಿ ಮಂಜುನಾಥ್ ಎಂದು ಕಾಂಗ್ರೆಸ್ ಅವರ ಅಭ್ಯರ್ಥಿಯಾಗಿದ್ದಾಗ, ಇಂದಿರಾ ಗಂಧಿ ಹೆಸರು ಹೇಳಿ, ಚುನಾವಣೆ ಗೆಲ್ಲುತ್ತೀರಿ ಎಂದು ಅವರಿಗೆ ಹೇಳಿದರು.
ಆ ಕಾಲದಲ್ಲಿಯೂ ಕಾಂಗ್ರೆಸ್ ನವರಿಗೆ ಅಲ್ಲ, ಇಂದಿರಾಗಾಂಧಿ ಹಸರು ಹೇಳಿದರೆ ಚುನಾವಣೆ ಗೆಲ್ಲುತ್ತಿದ್ದರು. ಅಂತೆಯೇ, ಮೋದಿಯವರಿಗೂ ಹೆಸರು ಇತ್ತು. ಆದರೆ ಈಗ ಅದು ಮಂಕಾಗುತ್ತಿದೆ. ಪ್ರಧಾನಿ ಮೋದಿಯವರು ಜನಪ್ರಿಯ ನಾಯಕ ಎಂಬುದರಲ್ಲಿ ಸಂಶಯವಿಲ್ಲ. ಆದರೆ ಈಗ ಮಂಕಾಗುತ್ತಿದೆ. ಮೇಲಿದ್ದವರು ಕೆಳಗೆ , ಕೆಳಗಿದ್ದವರು ಮೇಲೆ ಬರಬೇಕು. ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭವಾಗಿದೆ ಎಂದರು.
![]() |
![]() |
![]() |
![]() |
![]() |
[ays_poll id=3]