![]() |
![]() |
![]() |
![]() |
![]() |
K2 ಎಲೆಕ್ಷನ್ ನ್ಯೂಸ್ : ಚುನಾವಣೆ ನೀತಿ ಸಂಹಿತೆ ಹಾಗೂ ನಿಯಮಗಳ ಕುರಿತು ಈಗಾಗಲೇ ಎರಡು ಸುತ್ತಿನಲ್ಲಿ ಪೊಲೀಸರಿಗೆ ತರಬೇತಿ ನೀಡಲಾಗಿದೆ. ಸಾರ್ವಜನಿಕರು ಯಾವುದೇ ಅಮಿಷಕ್ಕೆ ಒಳಗಾಗದೆ ಮತದಾನ ಮಾಡಬೇಕು. ದೂರು ಸಲ್ಲಿಸಿದರೆ ತಮಗೆ ತೊಂದರೆ ಬರುತ್ತದೆ ಎಂದು ಸಾರ್ವಜನಿಕರು ಆತಂಕ ಪಡಬೇಕಿಲ್ಲ. ದೂರುದಾರರ ಮಾಹಿತಿಯನ್ನು ಬಹಿರಂಗಪಡಿಸುವುದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಹೇಳಿದರು.
ಜಿಲ್ಲೆಯಲ್ಲಿರುವ ಎಲ್ಲಾ 1679 ರೌಡಿ ಶೀಟರ್‌ಗಳಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಸುಮಾರು 1,400 ರೌಡಿ ಶೀಟರ್‌ಗಳಿಂದ ಬಾಂಡ್ ಪಡೆದುಕೊಳ್ಳಲಾಗಿದೆ. ಇಂತಹ ವ್ಯಕ್ತಿಗಳು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಕಾನೂನು ಕ್ರಮ ಜರುಗಿಸಲಾಗುವುದು. ಹಾಗೆಯೇ ಸುಮಾರು 1,200 ಲೀಟರ್ ಅಕ್ರಮ ಮದ್ಯ ಜಪ್ತಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
![]() |
![]() |
![]() |
![]() |
![]() |
[ays_poll id=3]