KRP ಪಕ್ಷದಿಂದ 224 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಸ್ಪರ್ಧೆ
![]() |
![]() |
![]() |
![]() |
![]() |
K2 ಪೊಲಿಟಿಕಲ್ ನ್ಯೂಸ್ : ರಾಜ್ಯ ರಾಜಕೀಯದಲ್ಲಿ ಸದ್ಯ ಜನಾರ್ಧನ್ ರೆಡ್ಡಿ ಅವರದ್ದೇ ಮಾತು. ಹೊಸ ಪಕ್ಷ ಆರಂಭಿಸಿದ ಜನಾರ್ದನ್ ರೆಡ್ಡಿ, ಮೊದಲಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಾತ್ರ ಸ್ಪರ್ಧೆ ಮಾಡುವ ಆಲೋಚನೆ ಹೊರಹಾಕಿದ್ದರು. ಆದರೆ ಈಗ ರಾಜ್ಯದ 224 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂಬ ಹೇಳಿಕೆ ನೀಡಿ ಮೂರು ಪಕ್ಷಗಳಿಗೆ ಶಾಕ್ ನೀಡಿದ್ದಾರೆ
ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಗಳು 224 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಘೋಷಣೆ ಮಾಡಿದ್ದಾರೆ. ಜನವರಿ ಕೊನೆ ವಾರದಲ್ಲಿ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡುತ್ತೇವೆ. ಪಕ್ಷದ ರಾಜ್ಯ ಅಧ್ಯಕ್ಷರನ್ನು ಕೆಲವೇ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಹೊಸಕೋಟೆ ಗ್ರಾಮದಲ್ಲಿ ತಿಳಿಸಿದ್ದಾರೆ. ಅಲ್ಲದೇ, BJP ಜತೆಗಿನ ಸಂಬಂಧ ಮುಗಿದ ಅಧ್ಯಾಯ, ಚುನಾವಣೆ ದೃಷ್ಟಿಯಿಂದ ಹೊಸ ಪಕ್ಷ ಕಟ್ಟಿಲ್ಲ ಎಂದು ರೆಡ್ಡಿ ಹೇಳಿದ್ದಾರೆ.
![]() |
![]() |
![]() |
![]() |
![]() |