K2kannadanews.in
tirupati laddu ಅಮರಾವತಿ : ಹಿಂದಿನ ವೈಎಸ್‌ಆರ್ (YSR) ಸರಕಾರ ಅವಧಿಯಲ್ಲಿ ತಿರುಪತಿಯ ಲಡ್ಡುಗಳಲ್ಲಿ ಪ್ರಾಣಿಗಳ (Animals) ಕೊಬ್ಬನ್ನು ಬಳಸಲಾಗುತ್ತಿತ್ತು. ಕಳಪೆ ಗುಣಮಟ್ಟದ (Low quality) ಲಡ್ಡನ್ನು ನೀಡುತ್ತಿದ್ದರು ಎಂದು ಮುಖ್ಯಮಂತ್ರಿ (CM) ಚಂದ್ರಬಾಬು ನಾಯ್ಡು ಆರೊಪ ಮಾಡಿದ್ದಾರೆ.
ಇತ್ತೀಚೆಗೆ ನಡೆದ ಎನ್‌ಡಿಎ (NDA) ಶಾಸಕಾಂಗ ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡಿದ ನಾಯ್ಡು, ಜಗನ್ ಸರ್ಕಾರದ (Government) ಅವಧಿಯಲ್ಲಿ, ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನವು (Temple) ಪ್ರಸಾದವಾಗಿ ನೀಡುವ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆರೋಪಿಸಿದ್ದಾರೆ. ಆದ್ರೇ ಸಿಎಂ ಚಂದ್ರಬಾಬು ನಾಯ್ಡು (ChandrababuNaidu) ಆರೋಪವನ್ನು ಮಾಜಿ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ (Jagan Mohan Reddy) ನೇತೃತ್ವದ ಪಕ್ಷವು ತಳ್ಳಿಹಾಕಿದೆ. ಇದು ದುರುದ್ದೇಶಪೂರಿತವಾಗಿದೆ ಎಂದು ಟೀಕಿಸಿದೆ.
ಕಳೆದ 5 ವರ್ಷಗಳಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ನಾಯಕರು ಪವಿತ್ರ ತಿರುಮಲ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಿ ಕಲುಷಿತಗೊಳಿಸಿದ್ದಾರೆ. ಆದರೆ, ನಾವು ಈಗ ಶುದ್ಧ ತುಪ್ಪವನ್ನು ಬಳಸುತ್ತಿದ್ದೇವೆ ಎಂದು ಹೇಳಿದ್ದಾರೆ. ಇವರ ಆರೋಪಕ್ಕೆ ರಾಜ್ಯಸಭಾ ಸಂಸದ ವೈವಿ ಸುಬ್ಬಾರೆಡ್ಡಿ, ಸಿಎಂ ನಾಯ್ಡು ಅವರು ತಿರುಮಲ ದೇಗುಲದ ಪಾವಿತ್ರ್ಯತೆಗೆ ಧಕ್ಕೆ ತಂದಿದ್ದಾರೆ. ಚಂದ್ರಬಾಬು ನಾಯ್ಡು ಅವರು ತಿರುಮಲದ ಪಾವಿತ್ರ್ಯತೆ ಮತ್ತು ಕೋಟ್ಯಂತರ ಹಿಂದೂಗಳ ನಂಬಿಕೆಯನ್ನು ಹಾಳು ಮಾಡಿದ್ದಾರೆ ಎಂದು ಗುಡುಗಿದ್ದಾರೆ.