
K2 ಕ್ರೈಂ ನ್ಯೂಸ್ : ಕೊಪ್ಪ ಖಾಸಗಿ ಶಾಲೆ ವಿದ್ಯಾರ್ಥಿ 750 ರೂಪಾಯಿ ಸಾಲಕ್ಕೆ ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ. ಸಣ್ಣ ಮೊತ್ತದ ಸಾಲದ ಶೂಲಕ್ಕೆ ಸಿಲುಕಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ವಿದ್ಯಾರ್ಥಿಗೆ ಸಾಲ ಕೊಟ್ಟು ಹಾಸ್ಟೆಲ್ ಸಿಬ್ಬಂದಿ ಕಿರುಕುಳ ನೀಡಿದ್ರಾ ಅನ್ನೋ ಪ್ರಶ್ನೆ ಮೂಡಿದೆ.
ಹೌದು ಕೊಪ್ಪ ಖಾಸಗಿ ಶಾಲೆಯಲ್ಲಿ ನಡೆದಿದ್ದ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ ಇದಾಗಿದೆ. 750 ರೂ. ಸಾಲ ಕೊಟ್ಟು 3 ಸಾವಿರ ರೂ. ಹಣ ಕೇಳಿರೋ ಆರೋಪ ಹಿನ್ನಲೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ವಿದ್ಯಾರ್ಥಿ ಬರೆದಿಟ್ಟ ಡೆತ್ ನೋಟ್ ಏಕಾಏಕಿ ವೈರಲ್ ಆಗಿದೆ. ಆಗಸ್ಟ್ 22ರಂದು ಕೊಪ್ಪದ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ.
ಡೆತ್ ನೋಟ್ ಬರೆದಿಟ್ಟು ಕಡೂರು ತಾಲೂಕಿನ ಹಿರೇಬಳ್ಳೇಕೆರೆ ಗ್ರಾಮದ ವಿದ್ಯಾರ್ಥಿ ಶ್ರೀನಿವಾಸ್ ಆತ್ಮಹತ್ಯೆ ಮಾಡಿಕೊಂಡಿದ್ದು, ಇದೀಗ ಮಗನ ಸಾವಿನಿಂದ ಮಾಜಿ ಯೋಧ ಗಳಗಳನೆ ಕಣ್ಣೀರಿಟ್ಟಿದ್ದಾರೆ. ಕೊಪ್ಪ ಪಟ್ಟಣದ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ರೀನಿವಾಸ್ ಡೆತ್‍ನೋಟ್‍ನಲ್ಲಿ ತನ್ನ ಸಾವಿಗೆ ಕಾರಣರಾದವರ ಬಗ್ಗೆ ತಿಳಿಸಿದ್ದಾನೆ. ನನ್ನ ಮಗನ ಸಾವಿಗೆ ನ್ಯಾಯ ಕೊಡಿಸಿ ಎಂದು ತಂದೆ-ತಾಯಿ ಕಣ್ಣೀರು ಹಾಕಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ವಿದ್ಯಾರ್ಥಿಯ ಆತ್ಮಹತ್ಯೆ ನಡೆದಿದೆ.
![]() |
![]() |
![]() |
![]() |
![]() |
[ays_poll id=3]