
K2 ನ್ಯೂಸ್ ಡೆಸ್ಕ್: ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ಬಲಿಯಾಗಿದ ಘಟನೆ ನಡೆದಿದ್ದು , 10ನೇ ತರಗತಿ ವಿದ್ಯಾರ್ಥಿ ಜಯಂತ್ ರಜತಾದ್ರಯ್ಯ ಹೃದಯಾಘಾತದಿಂದ ಮೃತಪಟ್ಟ ಬಾಲಕನಾಗಿದ್ದಾನೆ.
ಆನವಟ್ಟಿ ಜೂನಿಯರ್ ಕಾಲೇಜಿನಲ್ಲಿ ಜಯಂತ್ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಬೆಳಗ್ಗೆ ಎದ್ದು ಶಾಲೆಗೆ ಹೋಗಲು ತಯಾರಿ ನಡೆಸುತ್ತಿದ್ದಾಗ ಹೃದಯಾಘಾತವಾಗಿದೆ. ಎದೆನೋವುತ್ತಿದೆ ಎಂದು ಆತ ಹೇಳಿದ್ದು, ಕೂಡಲೇ ಆತನನ್ನು ಎಣ್ಣೆಕೊಪ್ಪ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯ್ತು.. ಆದ್ರೆ ಅಷ್ಟರಲ್ಲಾಗೇ ಜಯಂತ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಣೆ ಮಾಡಿದ್ದಾರೆ.
![]() |
![]() |
![]() |
![]() |
![]() |
[ays_poll id=3]