ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗಕ್ಕೆ ಆದ್ಯತೆ : ಸಿಎಂ
![]() |
![]() |
![]() |
![]() |
![]() |
K2 ನ್ಯೂಸ್ ಡೆಸ್ಕ್ : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಶಿಕ್ಷಣ ಆರೋಗ್ಯ ಮತ್ತು ಉದ್ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡಿದೆ ಮುಂದಿನ ದಿನಗಳಲ್ಲಿ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯವರು ಹೇಳಿದರು
ಕಾಯಕ, ಸ್ತ್ರೀ ಸಾಮರ್ಥ್ಯ , ವಿವೇಕಾನಂದ ಯುವಶಕ್ತಿ ಯೋಜನೆ ಮೂಲಕ ಎಲ್ಲ ವರ್ಗದ ಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸರಕಾರ ನೆರವು ನೀಡುತ್ತಿದೆ. ವಿವೇಕ ಯೋಜನೆಯಡಿ 8000 ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗುವುದು. ನಮ್ಮ ಕ್ಲಿನಿಕ್, ಶಾಲಾ ಕೊಠಡಿಗಳ ನಿರ್ಮಾಣ, ಆರೋಗ್ಯ ಸೌಲಭ್ಯ ಹೆಚ್ಚಳ ಮತ್ತಿತರ ವಿಷಯಗಳನ್ನು ಪ್ರಸ್ತಾಪಿಸಿದ ಅವರು, ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗಕ್ಕೆ ಆದ್ಯತೆ ನೀಡಲಾಗಿದೆ. ಪ್ರಜಾಪ್ರಭುತ್ವ ಎಂದರೆ ಮತ ಹಾಕುವುದು ಮಾತ್ರವಲ್ಲ; ದೇಶ ಕಟ್ಟುವುದರಲ್ಲಿ ಸರ್ವರ ಪಾಲ್ಗೊಳ್ಳುವಿಕೆಯು ಪ್ರಜಾಪ್ರಭುತ್ವದ ಶಕ್ತಿಯಾಗಿದೆ. ಗೋಹತ್ಯೆ ನಿಷೇಧ ಕಾನೂನು ಜಾರಿ ಮಾಡಲಾಗಿದೆ. ಗೋವುಗಳ ರಕ್ಷಣೆ ನಮ್ಮ ಸಂಸ್ಕೃತಿ. 30 ಜಿಲ್ಲೆಗಳಲ್ಲಿ ಗೋಶಾಲೆ ಪ್ರಾರಂಭಿಸಲಾಗಿದ್ದು, ಪುಣ್ಯಕೋಟಿ ದತ್ತು ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದರು.
ಹಿಂದಿನ ಸರಕಾರಗಳಿಗೆ ಇಚ್ಛಾಶಕ್ತಿ ಇಲ್ಲದಿರುವುದರಿಂದ ಪರಿಶಿಷ್ಟ ಜಾತಿ/ಪಂಗಡಗಳ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳ ಮಾಡಿರಲಿಲ್ಲ. ಆದರೆ ಯಾವುದೇ ಟೀಕೆ-ಟಿಪ್ಪಣಿಗೆ ಸೊಪ್ಪುಹಾಕದೇ ಪರಿಶಿಷ್ಟ ಜಾತಿ/ಪಂಗಡಗಳ ಸಮುದಾಯದ ಮೀಸಲಾತಿ ಹೆಚ್ಚಿಸುವ ದಿಟ್ಟ ನಿರ್ಧಾರವನ್ನು ಸರಕಾರ ತೆಗೆದುಕೊಂಡಿದೆ ಎಂದರು.
![]() |
![]() |
![]() |
![]() |
![]() |