
K2 ಪೊಲಿಟಿಕಲ್ ನ್ಯೂಸ್ : ಕೃಷಿ ಸಚಿವ ಸಚಿವರು ಲಂಚ ಕೇಳುತ್ತಿದ್ದಾರೆ ಎಂದು ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ ತಿನ್ನುವ ವಿಚಾರಕ್ಕೆ ಮಾಜಿ ಸಿಎಂ ಹೆಚ್‌ಡಿಕೆ ಮತ್ತು ಸಿಎಂ ಸಿದ್ದರಾಮಯ್ಯ ನಡುವೆ ಟ್ವಿಟರ್ ವಾರ್ ಬಲು ಜೋರಾಗಿಯೇ ನಡೆದಿದೆ.
ಇದೇ ವಿಚಾರಕ್ಕೆ ಮಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಅವರು ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ.. ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ ಸಿದ್ದಕಲೆ ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ ಎಂದಿದ್ದಾರೆ.
ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ!! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ 'ಸಿದ್ದಕಲೆ' ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ. 1/5#YstTax #CashForPosting
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2023
ನಕಲಿ ಪತ್ರ ಎಂದಾದರೆ ರಾಜ್ಯಪಾಲರ ಕಾರ್ಯಾಲಯ ನಕಲಿ? ಪತ್ರದ ಮೇರೆಗೆ ಕ್ರಮ ಜರುಗಿಸಿ ಎಂದು ಷರಾ ಬರೆದಿದೆಯೇ? ಸುಳ್ಳಿನ ಪತ್ರಕ್ಕೆ ರಾಜ್ಯಪಾಲರು ಸ್ಪಂದಿಸಿದ್ದಾರೆಯೇ? ರಾಜಧರ್ಮದ ಪ್ರವಚನಕಾರರೇ ರಾಜಭವನದ ಪಾವಿತ್ರ್ಯವನ್ನೇ ಶಂಕಿಸುವುದು ತರವೇ? ಸ್ವಯಂ ಘೋಷಿತ ನಕಲಿ ಸಂವಿಧಾನ ತಜ್ಞನಿಗೆ ಇದು ಭೂಷಣವಲ್ಲ ಎಂದು ವಾಗ್ಧಾಳಿ ನಡೆಸಿದ್ದಾರೆ.
ನಕಲಿ ಪತ್ರ ಎಂದಾದರೆ ರಾಜ್ಯಪಾಲರ ಕಾರ್ಯಾಲಯ ನಕಲಿ (!?) ಪತ್ರದ ಮೇರೆಗೆ ಕ್ರಮ ಜರುಗಿಸಿ ಎಂದು ಷರಾ ಬರೆದಿದೆಯೇ? ಸುಳ್ಳಿನ ಪತ್ರಕ್ಕೆ ಮಾನ್ಯ ರಾಜ್ಯಪಾಲರು ಸ್ಪಂದಿಸಿದ್ದಾರೆಯೇ? ರಾಜಧರ್ಮದ ಪ್ರವಚನಕಾರರೇ ರಾಜಭವನದ ಪಾವಿತ್ರ್ಯವನ್ನೇ ಶಂಕಿಸುವುದು ತರವೇ? ಸ್ವಯಂ ಘೋಷಿತ ನಕಲಿ ಸಂವಿಧಾನ ತಜ್ಞನಿಗೆ ಇದು ಭೂಷಣವಲ್ಲ. 2/5
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2023
ಕಂಡೋರ ಭುಜದ ಮೇಲೆ ಬಂದೂಕಿಟ್ಟು ಇನ್ನೊಬ್ಬರ ರಾಜಕೀಯ ಜೀವನ ಎತ್ತಿಬಿಡುವ ನಿಮ್ಮಂಥ ‘ಎತ್ತುವಳಿ ಗಿರಾಕಿ’ಗೆ ನಕಲಿಪತ್ರಗಳ ಸೃಷ್ಟಿ ಬೆಣ್ಣೆ ಕಡಿದಷ್ಟೇ ಸಲೀಸು. ಮತ್ತೊಬ್ಬರ ಶ್ರಮದ ಬೆವರೇ ನಿಮ್ಮ ಸ್ವಾರ್ಥ ರಾಜಕಾರಣಕ್ಕೆ ಹವಿಸ್ಸು ಎಂದು ಗುಡುಗಿದ್ದಾರೆ. ನಿಮ್ಮ ಸಚಿವರ ವಿರುದ್ಧ ನಿಮ್ಮ @INCKarnataka ಶಾಸಕರೇ ಬರೆದ ಪತ್ರವನ್ನೇ ನಕಲಿ ಎಂದು ಬಿಂಬಿಸಿದ ‘ನಕಲಿರಾಮ’ನ ಉಪ್ಪುಹುಳಿ ಖಾರದ ಬಗ್ಗೆ ನನಗೆ ಗೊತ್ತಿಲ್ಲದ್ದೇನಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಉಗಿದು ಉಪ್ಪಾಕಿದ ಮೇಲೆ ಆ ನಕಲಿ ಪತ್ರ ‘ಅಸಲಿ’ಯಾದ ಕಥೆಯ ಹಕೀಕತ್ತು ಏನಿರಬಹುದು ಸಿಎಂ ಸಾಹೇಬರೇ? ಎಂದು ಪ್ರಶ್ನಿಸಿದ್ದಾರೆ.
ಮಾಜಿ ಸಿಎಂ ಸರಣಿಗೆ ಪ್ರತಿಕ್ರಿಯೆ ಎಂಬಂತೆ ಸಿಎಂ ಸಿದ್ದರಾಮಯ್ಯ ಮಂಡ್ಯ ಜಿಲ್ಲೆಯ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂಬರ್ಥದಲ್ಲಿ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರ ನಕಲಿಯಾದುದು ಎಂದು ಬಯಲಾಗಿದೆ. ಅಂತಹ ಅಧಿಕಾರಿಗಳು ಯಾರು ಜಿಲ್ಲೆಯಲ್ಲಿ ಇಲ್ಲ ಎಂದು ಮಂಡ್ಯದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.
ಹೀಗಿದ್ದರೂ ಈ ಸಂಬಂಧ ಪರಿಶೀಲನೆ ನಡೆಸಿ, ಅಗತ್ಯ ಕಂಡುಬಂದಲ್ಲಿ ತನಿಖೆ ನಡೆಸುತ್ತೇವೆ. ಕರ್ನಾಟಕದ ಬಿಜೆಪಿ ನಾಯಕರೇ ಇಂತಹ ನಕಲಿ ಪತ್ರವನ್ನಿಟ್ಟುಕೊಂಡು ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ನೀವೇ ಇದರ ಸೃಷ್ಟಿಕರ್ತರೋ? ಅಥವಾ ನಿಮ್ಮ “ಬ್ರದರ್ರೋ”? ಎಂದು ಪರೋಕ್ಷವಾಗಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ.
ಮಂಡ್ಯ ಜಿಲ್ಲೆಯ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂಬರ್ಥದಲ್ಲಿ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರ ನಕಲಿಯಾದುದು ಎಂದು ಬಯಲಾಗಿದೆ.
ಅಂತಹ ಅಧಿಕಾರಿಗಳು ಯಾರು ಜಿಲ್ಲೆಯಲ್ಲಿ ಇಲ್ಲ ಎಂದು ಮಂಡ್ಯದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.
ಹೀಗಿದ್ದರೂ ಈ ಸಂಬಂಧ ಪರಿಶೀಲನೆ ನಡೆಸಿ, ಅಗತ್ಯ ಕಂಡುಬಂದಲ್ಲಿ… pic.twitter.com/kPR5TQColK
— Siddaramaiah (@siddaramaiah) August 7, 2023
ಕೊಟ್ಟರೆಯಾಗಿ ಕೃಷಿ ಸಚಿವರ ವಿರುದ್ಧ ಹರಿದಾಡುತ್ತಿರುವ ಪತ್ರಕ್ಕೆ ಸಿಎಂ ಮಾಜಿ ಸಿಎಂ ಪರಸ್ಪರ ವಾದ ವಾಗ್ವಾದ ಟ್ವಿಸ್ಟರ್ ಯುದ್ಧ ಮುಂದುವರೆದಿದೆ.
![]() |
![]() |
![]() |
![]() |
![]() |
[ays_poll id=3]