This is the title of the web page
This is the title of the web page
State News

ಕೂಸಿನ ಮನೆ ಯೋಜನೆ ಅನುಷ್ಠಾನಕ್ಕೆ ಸಿಎಂ ಸೂಚನೆ


K2 ನ್ಯೂಸ್ ಡೆಸ್ಕ್ : ಆಯವ್ಯಯದಲ್ಲಿ ಹೇಳಿರುವಂತೆ ಮಹಿಳೆಯರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಹಾಗೂ ಆರು ವರ್ಷದ ಒಳಗಿನ ಮಕ್ಕಳ ಆರೋಗ್ಯ , ಪೌಷ್ಟಿಕತೆ ಮತ್ತು ಸುರಕ್ಷತೆಗಾಗಿ ಕೂಸಿನ ಮನೆ ಹೆಸರಿನಲ್ಲಿ ನಾಲ್ಕು ಸಾವಿರ ಕೂಸಿನ ಮನೆಗಳನ್ನು ತೆರೆಯುವ ಕೆಲಸವನ್ನು ಶೀಘ್ರವಾಗಿ ಅನುಷ್ಠಾನಕ್ಕೆ ತರಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಮುಖ್ಯಮಂತ್ರಿಗಳ ಫೆಲೋಶಿಪ್ ಗಾಗಿ ಪ್ರತಿ ತಾಲ್ಲೂಕಿನ ಒಬ್ಬ ನುರಿತ ಯುವ ಪದವೀಧರರನ್ನು 24 ತಿಂಗಳ ಅವಧಿಗೆ ಆಯ್ಕೆ ಮಾಡುವುದು 10 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಸಚಿವರು ವಿವರಿಸಿದರು. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 400 ಸಮುದಾಯ ಶೌಚಾಲಯ ಸಂಕೀರ್ಣಗಳನ್ನು ತಲಾ 25 ಲಕ್ಷ ಗಳ ವೆಚ್ಚದಲ್ಲಿ ನಿರ್ಮಾಣ ಕಾರ್ಯವನ್ನು ಆಧುನಿಕ ತಂತ್ರಜ್ಞಾನ ಬಳಸಿ ಕಾರ್ಯಗತ ಮಾಡಲು ಮುಖ್ಯಮಂತ್ರಿಗಳು ಸೂಚಿಸಿದರು.

ಜಲ್ ಜೀವನ್ ಮಿಷನ್ ಯೋಜನೆಯಡಿ 800 ಗ್ರಾಮಗಳಿಗೆ ಕಾಮಗಾರಿ ಪೂರ್ಣಗೊಂಡಿದೆ ಎಂದು ಸಭೆಯಲ್ಲಿ ವಿವರಿಸಲಾಯಿತು. ಗ್ರಾಮೀಣ ಪ್ರದೇಶಗಳಲ್ಲಿ ಒಣ ತ್ಯಾಜ್ಯ ವಿಲೇವಾರಿಯಲ್ಲಿ ನಿರಂತರತೆ ಕಾಪಾಡಲು ಹಾಗೂ ವೈಜ್ಞಾನಿಕವಾಗಿ ನಿರ್ವಹಣೆ ಮಾಡಲು 27 ಜಿಲ್ಲೆಗಳಲ್ಲಿ ತಲಾ ಒಂದು ರಿಕವರಿ ಫೆಸಿಲಿಟಿಯನ್ನು ತಲಾ 2 ಕೋಟಿ ವೆಚ್ಚದಲ್ಲಿ ನಿರ್ಮಾಣ. 22 ಕೋಟಿ ರೂ.ಗಳನ್ನು ಪ್ರಸಕ್ತ ಸಾಲಿನಲ್ಲಿ ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.


[ays_poll id=3]