
K2 ಕ್ರೈಂ ನ್ಯೂಸ್ : ಕರ್ನಾಟಕ ಪ್ರವಾಸ ಕೈಗೊಂಡಿದ್ದ ಟ್ರಾವೆಲರ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಟ್ರಾವೆಲರ್ ಚಾಲಕ ಸೇರಿ ಇಬ್ಬರು ಮೃತಪಟ್ಟು, 14 ಜನರು ಗಾಯಗೊಂಡ ಘಟನೆ ಜೇವರ್ಗಿ ಹೊರವಲಯದ ಗೌನಳ್ಳಿ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಚಾಲಕ ಅಪ್ಪು ಕಲಬುರಗಿ(34) ಮತ್ತು ಹಾಗರಗುಂಡಗಿ ಗ್ರಾಮದ ಸಂಜೀವಕುಮಾರ (35) ಎಂದು ಗುರುತಿಸಲಾಗಿದೆ. ಹಾಗರಗುಂಡಗಿ ಗ್ರಾಮದ ಸುಮಾರು 14 ಜನ ಟ್ರಾವೆಲರ್‍ನಲ್ಲಿ ಕರ್ನಾಟಕ ಪ್ರವಾಸ ಕೈಗೊಂಡಿದ್ದರು. ಪ್ರವಾಸ ಮುಗಿಸಿಕೊಂಡು ಮರಳಿ ಹಾಗರಗುಂಡಗಿ ಗ್ರಾಮಕ್ಕೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ 11 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, 4-5 ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮಾಡಲಾಗುತ್ತಿದೆ.
![]() |
![]() |
![]() |
![]() |
![]() |
[ays_poll id=3]