This is the title of the web page
This is the title of the web page
National NewsPolitics News

ಚುನಾವಣೆ ನಡೆಸಲು ಆಯೋಗ ಸರ್ವಸನ್ನದ್ಧ – ಆಯುಕ್ತ ರಾಜೀವ್ ಕುಮಾರ್


K2kannadanews.in

Election News : ಲೋಕಸಭಾ ಚುನಾವಣೆ ನಡೆಸಲು ಆಯೋಗ ಸರ್ವಸನ್ನದ್ಧವಾಗಿದೆ. ಪ್ರತಿಯೊಂದು ಚುನಾವಣೆಯೂ ನಮಗೆ ಪರೀಕ್ಷೆ ಇದ್ದಂತೆ. ಮುಕ್ತ ನ್ಯಾಯಸಮ್ಮತ, ಪಾರದರ್ಶಕ ಚುನಾವಣೆ ನಮ್ಮ ಉದ್ದೇಶವಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್ ಹೇಳಿದರು.

ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುತ್ತಿರುವ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶಾದ್ಯಂತ 97 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. ದೇಶಾದ್ಯಂತ 10.5 ಲಕ್ಷ ಮತದಾನ ಕೇಂದ್ರಗಳು ಇದ್ದು, ಚುನಾವಣಾ ಕರ್ತವ್ಯಕ್ಕೆ ಒಂದೂವರೆ ಕೋಟಿ ಸಿಬ್ಬಂದಿ ಬಳಕೆ ಮಾಡಲಾಗುವುದು. ಮತದಾನಕ್ಕೆ ಒಟ್ಟು 55 ಲಕ್ಷ ಇವಿಎಂಗಳ ವ್ಯವಸ್ಥೆ ಮಾಡಲಾಗುವುದು ಎಂದರು. ದೇಶದಲ್ಲಿ 1.8 ಕೋಟಿ ಮತದಾರರು ಮೊದಲ ಬಾರಿಗೆ ಮತಚಲಾವಣೆ ಮಾಡಲಿದ್ದಾರೆ ಎಂದರು.

ಇನ್ನೂ 49.7 ಕೋಟಿ ಪುರುಷರು, 471 ಕೋಟಿ ಮಹಿಳಾ ಮತದಾರರಿದ್ದಾರೆ. 48 ಸಾವಿರ ತೃತೀಯ ಲಿಂಗಿ ಮತದಾರರು ಮತಚಲಾಯಿಸಲಿದ್ದಾರೆ. 85 ವರ್ಷ ಮೇಲ್ಪಟ್ಟ 82 ಲಕ್ಷ ಮತದಾರರು ಮತಚಲಾಯಿಸಲಿದ್ದಾರೆ. 19.74 ಕೋಟಿ ಯುವ ಮತದಾರರು ಮತ ಚಲಾಯಿಸಲಿದ್ದಾರೆ ಎಂದರು. 12 ರಾಜ್ಯಗಳಲ್ಲಿ ಪುರುಷ ಮತದಾರಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾ‌ರ್ ಹೇಳಿದರು.


[ays_poll id=3]