ರಾಯಚೂರು : ಅಧಿಕಾರ ದುರುಪಯೋಗ ಪಡಿಸಿಕೊಂಡು ಸರ್ಕಾರಕ್ಕೆ ವಂಚನೆ ಮಾಡುತ್ತಿರುವ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನೆ ಸಂಸ್ಥೆ ಜಿಲ್ಲಾ ವ್ಯವಸ್ಥಾಪಕ ವಿಜಯಕುಮಾರ ಅವರನ್ನು ಕರ್ತವ್ಯದಿಂದ ವಜಾಗೊಳಿಸಬೇಕೆಂದು ಕರ್ನಾಟಕ ಜನಸೈನ್ಯ ಘಟಕ ಜಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ರಾಯಚೂರು ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತ್ ಮಟ್ಟದ ಸ್ವ-ಸಹಾಯ ಗುಂಪುಗಳು ಹಾಗೂ ಒಕ್ಕೂಟಗಳ ರಚನೆ ಮಾಡುವಲ್ಲಿ, ಕಾರ್ಯಕ್ರಮಗಳನ್ನು ರೂಪಿಸುವಲ್ಲಿ, ಮಹಿಳೆಯರಿಗೆ ಜೀವನೋಪಾಯ ಕಲ್ಪಿಸಲು ಸರ್ಕಾರ ಹಣವನ್ನು ನೀಡುತ್ತಿದ್ದು, ಈ ಯೋಜನೆಯು ಸರಿಯಾದ ರೀತಿಯಲ್ಲಿ ಅನುಷ್ಠಾನಗೊಳಿಸದೆ ಜಿಲ್ಲಾ ವ್ಯವಸ್ಥಾಪಕ ವಿಜಯಕುಮಾರ್ ಅವರು ಕಾರ್ಯದಲ್ಲಿ ನೈತಿಕತೆ ತೋರದೆ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ದೂರಿದರು.
ಈ ಬಗ್ಗೆ ಅವರ ವಿರುದ್ಧ ಹಲವಾರು ಸಂಘ ಸಂಸ್ಥೆಗಳು ದೂರು ಸಲ್ಲಿಸಿದರೂ ಕೂಡ ಯಾವುದೇ ಕ್ರಮ ಕೈಗೊಂಡಿಲ್ಲ.
ಕಾರ್ಯಕ್ರಮದಲ್ಲಿ ಯವುದೇ ಪ್ರಚಾರ ಮಾಡದೇ, ಸಾರ್ವಜನಿಕ ಸಭೆಯನ್ನು ಕರೆಯದೇ ತಮಗೆ ಬೇಕಾದವರನ್ನು ಅಧ್ಯಕ್ಷ ಹಾಗೂ ಕಾರ್ಯದರ್ಶಿ ಸ್ಥಾನಗಳಿಗೆ ಮಾಡಿ ಅಮಾಯಕರಿಗೆ ಅನ್ಯಾಯ ಎಸಗುತ್ತಿದ್ದಾರೆ. ಆಶಾ ಕಾರ್ಯಕರ್ತರನ್ನು ಅಧ್ಯಕ್ಷ, ಕಾರ್ಯದರ್ಶಿಯ ಸ್ಥಾನ ನೀಡಬಾರದೆಂದು ನಿಯಮವಿದ್ದರೂ ಯದ್ಲಾಪೂರ ಪಂಚಾಯತಿ ವ್ಯಾಪ್ತಿಯಲ್ಲಿ ನಿಯಮ ಮೀರಿ ಆಶಾ ಕಾರ್ಯಕರ್ತರಿಗೆ ಕಾರ್ಯದರ್ಶಿಯನ್ನಾಗಿ ಮಾಡಿದ್ದಾರೆ ಕೂಡಲೇ ಇವರನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದರು.
![]() |
![]() |
![]() |
![]() |
![]() |
[ays_poll id=3]