
K2 ಕ್ರೈಂ ನ್ಯೂಸ್ : ಚಲಿಸುತ್ತಿದ್ದ ಖಾಸಗಿ ಬಸ್‌ನಿಂದ ಆಯತಪ್ಪಿ ಕೆಳಗೆ ಬಿದ್ದ ಕಂಡಕ್ಟರ್ ಮೃತಪಟ್ಟಿರುವ ಘಟನೆ ಮಂಗಳೂರು ನಗರದ ನಂತೂರು ವೃತ್ತದಲ್ಲಿ ನಡೆದಿದೆ. ಬಾಗಲಕೋಟೆ ಮೂಲದ ಈರಯ್ಯ (23) ಮೃತ ದುರ್ದೈವಿ.
ಕಂಡಕ್ಟರ್ ಈರಯ್ಯ ಫುಟ್‌ಬೋರ್ಡ್ ಮೇಲೆ ನಿಂತಿದ್ದರು. ವೇಗವಾಗಿ ಚಾಲಕ ಬಸ್ ತಿರುವು ಪಡೆಯುವಾಗ ಫುಟ್‌ಬೋರ್ಡ್‌ನಲ್ಲಿ ನಿಂತಿ ಈರಯ್ಯ ಕೈ ಜಾರಿತ್ತು. ಕೈಯಲ್ಲಿ ಟಿಕೆಟ್, ಹಣ ಹಿಡಿದುಕೊಂಡಿದ್ದ ಈರಯ್ಯ ನಿಯಂತ್ರಣ ತಪ್ಪಿ ಬಸ್‌ನಿಂದ ನೇರ ಹೊರಗೆ ಹಾರಿ ರಸ್ತೆಗೆ ಮುಗ್ಗರಿಸಿ ಬಿದ್ದಿದ್ದ.
ತಕ್ಷಣ ಅಲ್ಲಿ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸರು ಮತ್ತು ಸಾರ್ವಜನಿಕರು ಸೇರಿ ಆಟೋ ರಿಕ್ಷಾದಲ್ಲಿ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ತಲೆ ಭಾಗಕ್ಕೆ ತೀವ್ರ ಪೆಟ್ಟು ಬಿದ್ದ ಕಾರಣ ರಾತ್ರಿ 8 ಗಂಟೆ ಸುಮಾರಿಗೆ ಯುವಕ ಮೃತಪಟ್ಟಿದ್ದಾನೆ. ಘಟನೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಬಸ್ ವೇಗವಾಗಿ ಚಲಿಸಿದ್ದರಿಂದಲೇ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕದ್ರಿ ಸಂಚಾರಿ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.
![]() |
![]() |
![]() |
![]() |
![]() |
[ays_poll id=3]