![]() |
![]() |
![]() |
![]() |
![]() |
K2 ಪೊಲಿಟಿಕಲ್ ನ್ಯೂಸ್ : ಸುಮಾರು 70 ರಿಂದ 80 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ 2ನೇ ಹಂತದ ಕಸರತ್ತು ಮಂಗಳವಾರ ಹಾಗೂ ಬುಧವಾರ ಎರಡು ದಿನಗಳ ಕಾಲ ನಡೆಯಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸುವೆ.
ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಅಂತಿಮಗೊಳಿಸಲು ಸ್ಟೀನಿಂಗ್ ಸಮಿತಿ ಇಂದು ಸಭೆ ನಡೆಸಲಿದೆ. ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಬಾಕಿ ಉಳಿದಿರುವ 100 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯನ್ನೂ ತ್ವರಿತವಾಗಿ ಮುಗಿಸಲು ವರಿಷ್ಠರು ಮುಂದಾಗಿದ್ದಾರೆ. ಮೊದಲ ಪಟ್ಟಿ ಪ್ರಕಟವಾದ ಬಳಿಕ ಉಳಿದ ಕ್ಷೇತ್ರಗಳ ಆಕಾಂಕ್ಷಿಗಳು ನಾಯಕರ ಮೇಲೆ ತೀವ್ರ ಒತ್ತಡ ಹೇರಲಾರಂಭಿಸಿದ್ದಾರೆ. ಹೀಗಾಗಿ, ವಾರದೊಳಗೆ ಪಟ್ಟಿ ರಿಲೀಸ್ ಮಾಡಲು ಚಿಂತನೆ ನಡೆಸಲಾಗಿದೆ.
ಪ್ರಮುಖರಾದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಸಮ್ಮುಖದಲ್ಲಿ ಈ ಸಭೆ ನಡೆಯಲಿದೆ. ಪ್ರಥಮ ಹಂತದಲ್ಲಿ ಈಗಾಗಲೇ 130ರಿಂದ 150 ಕ್ಷೇತ್ರಗಳಿಗೆ ಒಂದೊಂದೇ ಅಭ್ಯರ್ಥಿ ಆಯ್ಕೆ ಮಾಡಿ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲೂ ಸಮ್ಮತಿ ಪಡೆಯಲಿದೆ. ಉಳಿದಂತೆ ಒಂದಕ್ಕಿಂತ ಹೆಚ್ಚು ಟಿಕೆಟ್ ಆಕಾಂಕ್ಷಿಗಳಿರುವ 70 ರಿಂದ 80 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಬಗ್ಗೆ ಈ ಸಭೆ ನಡೆಯಲಿದೆ.
![]() |
![]() |
![]() |
![]() |
![]() |
[ays_poll id=3]