
ರಾಯಚೂರು : ಕಾಂಗ್ರೆಸ್ ಸಚಿವ ಸಂಪುಟದಲ್ಲಿ ರಾಯಚೂರು ಜಿಲ್ಲೆ ಎಂದುಯ ಹಿರಿಯ ಕಾಂಗ್ರೆಸ್ ಮುಖಂಡ ಎನ್ ಎಸ್ ಬೋಸ್ ರಾಜ್ ರವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸಮಮಾಚರಣೆ ಮನೆ ಮಾಡಿದೆ.
ರಾಯಚೂರು ನಗರದ ರಾಜೇಂದ್ರ ಗಂಜ್ ನಲ್ಲಿರುವ ಯುವಕರು ಸಚಿವರಾಗುತ್ತಿದ್ದಂತೆ, ನಗರದ ಮಡ್ಡಿಪೇಟೆ ಬಡಾವಣೆಯಲ್ಲಿರುವ ಲಕ್ಷ್ಮಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಿದರು.
ಈ ವೇಳೆ ಮಾತನಾಡಿದ ಸಮಾಜದ ಮುಖಂಡ ನರಸರೆಡ್ಡಿ ಅವರು ಎನ್ ಎಸ್ ಬೋಸರಾಜರವರಿಗೆ ಸಚಿವ ಸ್ಥಾನ ನೀಡಿದ್ದು, ಜಿಲ್ಲೆಯ ಜನರಿಗೆ ಸಂತಸ ತಂದಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳನ್ನ ಸಲ್ಲಿಸಿದರು.
![]() |
![]() |
![]() |
![]() |
![]() |
[ays_poll id=3]