![]() |
![]() |
![]() |
![]() |
![]() |
ರಾಯಚೂರು : 2023ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಭರ್ಜರಿ ಸಿದ್ಧತೆ ನಡೆಸಿದ್ದು, ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ರಾಯಚೂರು ಜಿಲ್ಲೆಯ ಹಾಲಿ ಶಾಸಕರ ಹೆಸರು ಮೊದಲ ಪಟ್ಟಿಯಿಂದ ಬಿಟ್ಟಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಳೆದು ತೂಗಿ 124 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಒಂದು ಪಟ್ಟಿಯಲ್ಲಿ ಬಹುತೇಕ ಹಾಲಿ ಶಾಸಕರ ಹೆಸರುಗಳು ಇದ್ದು ರಾಯಚೂರು ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ರಾಯಚೂರು ಗ್ರಾಮಾಂತರ ಮತ್ತು ಮಸ್ಕಿ, ಲಿಂಗಸುಗೂರು ವಿಧಾನಸಭಾ ಕ್ಷೇತ್ರಗಳಲ್ಲಿ ಹಾಲಿ ಶಾಸಕರು ಇದ್ದರು, ಆದರೆ ಕೇವಲ ಗ್ರಾಮಾಂತರ ಶಾಸಕ ಬಸನಗೌಡ ದದ್ದಲ್ ಮತ್ತು ಮಸ್ಕಿ ಶಾಸಕ ಬಸನಗೌಡ ತುರುವಿಹಾಳ ಅವರ ಹೆಸರು ಮಾತ್ರ ಘೋಷಣೆ ಆಗಿದೆ.
ಲಿಂಗಸುಗೂರು ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಶಾಸಕ ಹೂಲಗೇರಿ ಅವರು, ಬಿಜೆಪಿ ಪಕ್ಷಕ್ಕೆ ಹೋಗುತ್ತಾರೆ ಎಂಬ ಮಾತುಗಳು ಹರಿದಾಡುತ್ತಿದ್ದು, ಇದಕ್ಕೆ ಮತ್ತಷ್ಟು ಪುಷ್ಟಿ ನೀಡಿದಂತಾಗಿದೆ. ಕಾರಣ ಕ್ಷೇತ್ರದ ಬಹುತೇಕ ಕಾಂಗ್ರೆಸ್ ಕಾರ್ಯಕರ್ತರು ಮೊದಲ ಪಟ್ಟಿಯಲ್ಲಿ ಹೆಸರು ಘೋಷಣೆಯಾಗುವ ನಿರೀಕ್ಷೆ ಇಟ್ಟುಕೊಂಡಿದ್ದರು ಆದರೆ ಇದೀಗ ಡಿಎಸ್ ಹುಲಗೇರಿ ಅವರ ಕಾರ್ಯಕರ್ತರಲ್ಲಿ ನಿರಾಸೆ ಮೂಡಿಸಿದೆ.
![]() |
![]() |
![]() |
![]() |
![]() |
[ays_poll id=3]