
K2 ಪೊಲಿಟಿಕಲ್ ನ್ಯೂಸ್ : ರಾಜ್ಯದಲ್ಲಿ ಮೂರು ಪಕ್ಷಗಳು ವಿವಿಧ ಕಾರ್ಯಕ್ರಮಗಳನ್ನ ಮಾಡುವ ಮುಖಾಂತರ ಮತದಾರರ ಓಲೈಕೆಗೆ ಮುಂದಾಗಿವೆ. ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯ ಮುಖಾಂತರ ಪ್ರಚಾರದ ಅಖಾಡಕ್ಕೆ ಧುಮುಕಿದೆ. ಆದರೆ ಸಚಿವ ಅಶ್ವಥ್ ನಾರಾಯಣ ಅವರು ಇದೊಂದು ಪ್ರಜಾ ಗೋವಿಂದ ಯಾತ್ರೆ ಇದರಿಂದ ಕಾಂಗ್ರೆಸ್ ಸಂಖ್ಯೆ ಇಳಿಮುಖವಾಗಲಿದೆ ಎಂದು ವ್ಯಂಗ್ಯ ಮಾಡಿದ್ದಾರೆ.
ಹೌದು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ವಿವಿಧ ಕಾರ್ಯಕ್ರಮಗಳೊಂದಿಗೆ ಮತದಾರರ ಬಳಿ ಹೋಗುತ್ತಿವೆ. ಕಾಂಗ್ರೆಸ್ ಮಾಡುತ್ತಿರುವ ಪ್ರಜಾದ್ವನಿ ಯಾತ್ರೆ ಬಗ್ಗೆ ಮಾತನಾಡಿದ ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ ಅವರು, ಕಾಂಗ್ರೆಸ್ ನಡೆಸುತ್ತಿರುವುದು ಪ್ರಜಾಧ್ವನಿ ಯಾತ್ರೆಯಲ್ಲ, ಪ್ರಜಾಗೋವಿಂದ ಯಾತ್ರೆ ಎಂದು ವ್ಯಂಗ್ಯಮಾಡಿದ್ದಾರೆ.
ಪ್ರಜಾಧ್ವನಿ ಯಾತ್ರೆ ಗೋವಿಂದ ಯಾತ್ರೆಯಾಗಿದೆ. ಪ್ರಜಾವಿರೋಧಿ ಯಾತ್ರೆಯಿಂದ ಕಾಂಗ್ರೆಸ್ ಸಂಖ್ಯೆ ಇಳಿಮುಖವಾಗಲಿದೆ. ರಾಜ್ಯದಲ್ಲಿ 120 ಸ್ಥಾನದಲ್ಲಿದ್ದ ಕಾಂಗ್ರೆಸ್ ಪಕ್ಷವನ್ನು 79ಕ್ಕೆ ತಂದ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ. ಈಗ 79 ರಿಂದ 52ಕ್ಕೆ ಇಳಿಸುವುದು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸಾಧನೆ ಆಗಲಿದೆ ಎಂದು ಹೇಳಿದರು.
![]() |
![]() |
![]() |
![]() |
![]() |
[ays_poll id=3]