ರಾಯಚೂರು : ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ರಾಯಚೂರು ನಗರ ಕ್ಷೇತ್ರಕ್ಕೆ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕು ಎಂದು ಮುಸ್ಲಿಂ ಧರ್ಮಗುರುಗಳ ಸಮಿತಿಯ ಜಿಲ್ಲಾಧ್ಯಕ್ಷ ಅಸಿಮುದ್ದಿನ್ ಅಕ್ತರ್ ಆಗ್ರಹಿಸಿದರು.
ರಾಯಚೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 60ಸಾವಿರ ಮುಸ್ಲಿಂ ಮತದಾರರಿದ್ದು, ಸಾಮಾಜಿಕವಾಗಿ ಇತರೆ ಸಮುದಾಯದ ಮತಗಳನ್ನು ಪಡೆದ ಒಬ್ಬ ಮುಸ್ಲಿಂ ಅಭ್ಯರ್ಥಿ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ. ಕಳೆದ 20 ವರ್ಷಗಳಿಂದ ಮುಸ್ಲಿಂ ಸಮುದಾಯ ರಾಯಚೂರು ನಗರ ಹೊರತುಪಡಿಸಿ ಜಿಲ್ಲೆಯ ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಕೇಳದೆ ಪಕ್ಷಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಬೆನ್ನೆಲುಬಾಗಿ ನಿಂತಿದೆ. ನಗರದಲ್ಲಿ ಮುಸ್ಲಿಂ ಸಮುದಾಯದ ಎಲ್ಲಾ ಆಕಾಂಷಿ ಗಳ ಜೊತೆಗೆ ಸಭೆ ನಡೆಸಿದ್ದು, ಅವರೆಲ್ಲ ಒಂದಾಗಿ ಚುನಾವಣೆ ಎದುರಿಸಲು ತೀರ್ಮಾನಿಸಲಾಗಿದೆ.
ಅರ್ಜಿ ಸಲ್ಲಿಸಿದ 12 ಜನರಲ್ಲಿ ಯಾರಾದರೂ ಒಬ್ಬ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಿದ್ದಲ್ಲಿ ಉಳಿದೆಲ್ಲರೂ ಬೆಂಬಲಿಸುತ್ತೇವೆ ಎಂದಿದ್ದಾರೆ. ನಗರಕ್ಷೇತ್ರಕ್ಕೆ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕೆಂದು ರಾಜ್ಯ ಹಾಗೂ ಕೇಂದ್ರ ನಾಯಕರಿಗೆ ಮನವೆ ಮಾಡಿಕೊಳ್ಳುತ್ತೇವೆ. ರಾಯಚೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಮುಸ್ಲಿಂ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡದಿದ್ದರೆ ಉಳಿದ ಆರು ಕ್ಷೇತ್ರಗಳಲ್ಲಿ ಪಕ್ಷಕ್ಕೆ ಬಾರಿ ಹಾನಿ ಉಂಟಾಗುತ್ತದೆ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದಿದ್ದರೆ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಬಹಿಷ್ಕರಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
![]() |
![]() |
![]() |
![]() |
![]() |
[ays_poll id=3]