
K2 ಪೊಲಿಟಿಕಲ್ ನ್ಯೂಸ್ : 2023ರ ಚುನಾವಣೆ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿಯುವುದು ಖಚಿತ ಎಂದು ಹೇಳಿಕೆ ನೀಡಿದ ಸಿದ್ದರಾಮಯ್ಯ ಮತ್ತಷ್ಟು ಯೋಜನೆಗಳನ್ನು ಜಾರಿ ಮಾಡುವ ಭರವಸೆ ನೀಡಿದ್ದಾರೆ.
ಹೌದು ಬಿಜೆಪಿ ಆಡಳಿತದಿಂದ ಬೇಸತ್ತ ಮತದಾರರು ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೂ ಅಷ್ಟೇ ಸತ್ಯವೆಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಏನೇ ಮಾಡಿದರೂ ಕೊಪ್ಪಳ ಜಿಲ್ಲೆಯಲ್ಲಿ ಒಂದೇ ಒಂದು ಸ್ಥಾನವನ್ನೂ ಗೆಲ್ಲಲು ಆಗಲ್ಲ. ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಲ್ಲಿ ಎಲ್ಲಾ ಭರವಸೆಗಳನ್ನೂ ಈಡೇರಿಸುತ್ತೇವೆ. ನಾವು ಈಗಾಗಲೇ ನುಡಿದಂತೆ ನಡೆದಿದ್ದೇವೆ. ಬಿಜೆಪಿ ಸರ್ಕಾರ ರಾಜ್ಯವನ್ನು ದಿವಾಳಿ ಮಾಡುತ್ತಿದ್ದು, ಮೋದಿಯೂ ಅದನ್ನೇ ಮಾಡುತ್ತಿದ್ದಾರೆಂದು ಕಿಡಿಕಾರಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ವಾರ್ಷಿಕ 15000 ಕೋಟಿ ಅನುದಾನ ನೀಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ರಾಜ್ಯದ ಎಲ್ಲಾ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಆದಷ್ಟೂ ಬೇಗ ಭರ್ತಿ ಮಾಡುತ್ತೇವೆ. ಅನ್ನಭಾಗ್ಯ ಯೋಜನೆ ಅಡಿ ಈಗ ನೀಡಲಾಗುತ್ತಿರುವ 5 ಕೆಜಿ ಬದಲಾಗಿ 10 ಕೆಜಿ ಅಕ್ಕಿ ವಿತರಿಸುತ್ತೇವೆ. ಈಗಾಗಲೇ ಪ್ರತೀ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಕುಟುಂಬದ ಓರ್ವ ವಿವಾಹಿತ ಮಹಿಳೆಗೆ ತಿಂಗಳಿಗೆ 12000 ಸಹಾಯಧನ ಘೋಷಿಸಲಾಗಿದೆ ಎಂದರು.
![]() |
![]() |
![]() |
![]() |
![]() |
[ays_poll id=3]