This is the title of the web page
This is the title of the web page
Local NewsPolitics News

ಬಿಜೆಪಿ ಹ್ಯಾಟ್ರಿಕ್ ಗೆಲುವಿಗೆ ಬ್ರೇಕ್ ಹಾಕುತ್ತಾ ಕಾಂಗ್ರೆಸ್


ರಾಯಚೂರು : ಚುನಾವಣಾ ಇತಿಹಾಸದಲ್ಲಿ ನೋಡಿದಾಗ ರಾಯಚೂರು ನಗರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆ ಆಗಿತ್ತು. ಆದರೆ ಕಳೆದ ಎರಡೂ ಅವಧಿಯಲ್ಲಿ ಸೋಲು ಕಂಡಿದ್ದ ಕಾಂಗ್ರೆಸ್‌ ಪ್ರಸಕ್ತ ಚುನಾವಣೆಯಲ್ಲಿ ಗೆಲುವು ಸಾಧಿಸಲೇಬೇಕೆಂಬ ಹಠದಲ್ಲಿದೆ. ಕ್ಷೇತ್ರದ ಇತಿಹಾಸದಲ್ಲಿ ಎರಡು ಬಾರಿ ಗೆಲುವು ಕಂಡಿರುವ ಬಿಜೆಪಿ ಮೂರನೇ ಬಾರಿ ಗೆಲ್ಲಲೇಬೇಕು ಎನ್ನುವ ಛಲದಲ್ಲಿದೆ.

ಸತತ ಎರಡು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದ ಡಾ.ಶಿವರಾಜ್‌ ಪಾಟೀಲ್ ಹ್ಯಾಟ್ರಿಕ್ ಗೆಲುವು ಸಾಧಿಸಲು ರಣತಂತ್ರವನ್ನು ರೂಪಿಸಿದ್ದಾರೆ. ಮತ್ತೊಂದೆಡೆ ಬಿಜೆಪಿಯ ಹ್ಯಾಟ್ರಿಕ್ ಗೆಲುವಿಗೆ ಬ್ರೇಕ್ ಹಾಕಲು ಕಾಂಗ್ರೆಸ್ ಕೂಡ ತೀವ್ರ ಕಸರತ್ತು ನಡೆಸುತ್ತಿದೆ. ಕಾಂಗ್ರೆಸ್‌ನಿಂದ 17 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಇವರಲ್ಲಿ ಮಾಜಿ ಶಾಸಕರಾದ ಸೈಯ್ಯದ್ ಯಾಸೀನ್, ಎನ್.ಎಸ್.ಬೋಸರಾಜು ಹೆಸರುಗಳು ಮುಂಚೂಣಿಯಲ್ಲಿವೆ.

ಮುಸ್ಲಿಂರಿಗೆ ಟಿಕೆಟ್ ಕೊಡುವಂತೆ ಪಟ್ಟು : ಹಿಂದಿನಿಂದಲೂ ಕಾಂಗ್ರೆಸ್ ಮುಸ್ಲಿಂ ಸಮುದಾಯದವರಿಗೆ ಟಿಕೆಟ್ ನೀಡುತ್ತಾ ಬಂದಿದೆ. ಈ ಬಾರಿಯು ಮುಸ್ಲಿಂ ಸಮಾಜಕ್ಕೆ ಟಿಕೆಟ್ ನೀಡಬೇಕು ಎನ್ನುವ ಕೂಗು ಕ್ಷೇತ್ರದಲ್ಲಿ ಬಲವಾಗಿ ಕೇಳಿಬರುತ್ತಿದೆ. ಕಳೆದೆರಡು ಚುನಾವಣೆಯಲ್ಲಿ ಸೋಲುಂಡಿರುವ ಮಾಜಿ ಶಾಸಕ ಸೈಯ್ಯದ್ ಯಾಸೀನ್‌ಗೆ ಟಿಕೆಟ್ ತಪ್ಪಿದರೆ ಅದೇ ಸಮುದಾಯದವರಿಗೆ ಟಿಕೆಟ್ ಕೊಡಬೇಕು ಎನ್ನುವ ಒತ್ತಡವನ್ನು ಹೈಕಮಾಂಡ್ ಮೇಲೆ ಹೇರಲಾಗಿದೆ.

ಇನ್ನು ಜೆಡಿಎಸ್ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದೆ. ಜೆಡಿಎಸ್‌ನಿಂದ ಅಧಿಕೃತವಾಗಿ ಟಿಕೆಟ್ ಘೋಷಣೆಯಾಗದೆ ಇದ್ದರೂ, ವಿನಯ್‌ ಕುಮಾರ್‌ ಅವರು ಕ್ಷೇತ್ರದಲ್ಲಿ ಜೆಡಿಎಸ್ ಪರ ಪ್ರಚಾರ ಕೈಗೊಂಡಿದ್ದಾರೆ. ಕಾಂಗ್ರೆಸ್ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡುತ್ತದೆಯೋ, ಇಲ್ಲವೋ ಅನ್ನುವುದನ್ನು ಆಧರಿಸಿ ಜೆಡಿಎಸ್ ಅಂತಿಮ ನಿರ್ಧಾರಕ್ಕೆ ಬರುವ ಸಾಧ್ಯತೆಯಿದೆ. ಈಗಾಗಲೇ ಎರಡು ಬಾರಿ ಶಾಸಕರಾಗಿರುವ ಡಾ.ಶಿವರಾಜ್‌ ಪಾಟೀಲ್ ಅವರು ಮತ್ತೊಮ್ಮೆ ಬಿಜೆಪಿಯಿಂದ ಕಣಕ್ಕಿಳಿದು ಮೂರನೇ ಬಾರಿ ಜಯಬಾರಿ ಸಾಧಿಸುವ ಕಾತರದಲ್ಲಿದ್ದಾರೆ.


[ays_poll id=3]