This is the title of the web page
This is the title of the web page
Politics News

ಕಾಂಗ್ರೆಸ್ ಗೆ ಗೊಂದಲದ ಗೂಡಾದ 5 ಕ್ಷೇತ್ರಗಳು


ರಾಯಚೂರು : ಚುನಾವಣೆ ಹತ್ತಿರವಾಗುತ್ತಿದೆ, ಎರಡು ರಾಷ್ಟ್ರೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಪ್ರಕಟ ಆಗಿಲ್ಲ. ಆದರೆ ಕಾಂಗ್ರೆಸ್‌ ಪ್ರಕಟಿಸದೇ ಇರುವ 100 ಕ್ಷೇತ್ರಗಳಲ್ಲಿ ಈಗಾಗಲೇ 50 ಕ್ಷೇತ್ರಗಳಲ್ಲಿನ ಸ್ಥಿತಿ ನೀಡಿಯಾಗಿದೆ. ರಾಯಚೂರು ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರದಲ್ಲಿ 2 ಕ್ಷೇತ್ರಗಳು ಮಾತ್ರ ಘೋಷಣೆಯಾಗಿವೆ, ಉಳಿದ ಕ್ಷೇತ್ರಗಳಲ್ಲಿ ಏನಾಗುತ್ತಿದೆ? ಆಕಾಂಕ್ಷಿಗಳೆಷ್ಟಿದ್ದಾರೆ? ಪಟ್ಟಿ ಪ್ರಕಟಿಸುವಲ್ಲಿ ತಡವಾಗುತ್ತಿರುವುದಾದರೂ ಯಾಕೆ ಎಂದು ನೋಡುವುದಾದರೆ.

ರಾಯಚೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಕ್ಷೇತ್ರ 5 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಬೇಕಿದೆ. ಅದರಲ್ಲಿ ಮಾನ್ವಿ ಕ್ಷೇತ್ರದಲ್ಲಿ ಮಾಜಿ ಶಾಸಕ ಹಂಪಯ್ಯ ನಾಯಕ ಮತ್ತೂಮ್ಮೆ ಟಿಕೆಟ್‌ ಬಯಸುತ್ತಿದ್ದು, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಬಿ.ವಿ.ನಾಯಕ ಕೂಡ ಆಕಾಂಕ್ಷಿಯಾಗಿದ್ದಾರೆ.

ರಾಯಚೂರು ನಗರ ಕ್ಷೇತ್ರದಲ್ಲಿ ಆಕಾಂಕ್ಷಿಗಳು ಹೆಚ್ಚಿದ್ದಾರೆ. ಅದರಲ್ಲೂ 13 ಅಲ್ಪಸಂಖ್ಯಾತರೇ ಇದ್ದಾರೆ. ಹೀಗಾಗಿ ನಮಗೇ ಕೊಡಿ ಎನ್ನುತ್ತಿದ್ದಾರೆ. ಮಾಜಿ ಎಂಎಲ್‌ಸಿ ಎನ್‌.ಎಸ್‌.ಬೋಸರಾಜ್‌ ಈ ಬಾರಿಯೂ ಆಕಾಂಕ್ಷಿಯಾಗಿದ್ದಾರೆ.

ಸಿಂಧನೂರು ಕ್ಷೇತ್ರದಲ್ಲಿ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಪ್ರಬಲ ಅಭ್ಯರ್ಥಿಯಾಗಿ ಗುರುತಿಸಿಕೊಂಡಿದ್ದಾರೆ. ಅವರ ಜತೆಗೆ ಕಾಂಗ್ರೆಸ್‌ ಯುವ ಘಟಕದ ಮಾಜಿ ರಾಜ್ಯಾಧ್ಯಕ್ಷ ಬಸನಗೌಡ ಬಾದರ್ಲಿ, ಮುಖಂಡ ಕೆ.ಕರಿಯಪ್ಪ ಕೂಡ ಟಿಕೆಟ್‌ ಆಕಾಂಕ್ಷಿಗಳಾಗಿದ್ದಾರೆ. ಹಂಪನಗೌಡ ನಾಲ್ಕು ಬಾರಿ ಶಾಸಕರಾಗಿದ್ದು, ಈ ಬಾರಿ ಹೊಸಬರಿಗೆ ಅವಕಾಶ ನೀಡಬೇಕೆನ್ನುವ ಕೂಗಿದೆ. ಟಿಕೆಟ್‌ ಕೈ ತಪ್ಪಿದರೆ ಕೆ.ಕರಿಯಪ್ಪ ಬಿಜೆಪಿಯತ್ತ ಮುಖ ಮಾಡುವ ಸಾಧ್ಯತೆಗಳಿದ್ದು, ಭಿನ್ನಮತದ ಭೀತಿ ಇದೆ.

ಇನ್ನು ಲಿಂಗಸುಗೂರು ಕ್ಷೇತ್ರದಲ್ಲಿ ಹಾಲಿ ಶಾಸಕ ಡಿ.ಎಸ್‌.ಹೂಲಿಗೇರಿ ಹೆಸರು ಮೊದಲ ಪಟ್ಟಿಯಲ್ಲಿ ಬಂದಿಲ್ಲ. ರುದ್ರಯ್ಯ, ಎಚ್‌.ಬಿ. ಮುರಾರಿ ಎಂಬುವರು ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಕಾಂಗ್ರೆಸ್‌ ಮುಖಂಡರ ಒಳಜಗಳಗಳಿಂದ ಅಲ್ಲಿ ಟಿಕೆಟ್‌ ಅಂತಿಮಗೊಂಡಿಲ್ಲ ಎನ್ನಲಾಗುತ್ತಿದೆ.

ದೇವದುರ್ಗದಲ್ಲಿ ಮಾಜಿ ಸಂಸದ ಬಿ.ವಿ.ನಾಯಕ ಅವರ ಸೊಸೆ ಶ್ರೀದೇವಿ ನಾಯಕ ಸಾಕಷ್ಟು ಸಂಚಾರ ಮಾಡುತ್ತಿದ್ದು, ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಬಿ.ವಿ.ನಾಯಕರಿಗೇ ಟಿಕೆಟ್‌ ನೀಡಬೇಕು ಎನ್ನುವ ಒತ್ತಾಯಗಳಿವೆ.

ಒಟ್ಟಾರೆಯಾಗಿ ರಾಯಚೂರು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿಲ್ಲ, ಒಂದು ಕಡೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಗೊಂದಲಗಳು ಕಾಡುತ್ತಿದ್ದರೆ. ಇನ್ನೂ ಪಕ್ಷದಲ್ಲಿ ಒಬ್ಬರಿಗೆ ಟಿಕೆಟ್ ಘೋಷಣೆ ಮಾಡಿದರೆ ಭಿನ್ನಮತ ಎದುರಿಸಬೇಕಾಗುತ್ತದೆ ಎಂಬ ನಿಟ್ಟಿನಲ್ಲಿ ತಂತ್ರಗಳನ್ನ ರೂಪಿಸಿ, ಎಲ್ಲರಿಗೂ ಸಮಾಧಾನಪಡಿಸಿ ಒಬ್ಬರಿಗೆ ಟಿಕೆಟ್ ನೀಡುವ ಕೆಲಸ ಮಾಡುತ್ತಿದೆ.


[ays_poll id=3]