
K2 ಪೊಲಿಟಿಕಲ್ ನ್ಯೂಸ್ : 2023ರ ಚುನಾವಣೆ ಸಾಕಷ್ಟು ಕುತೂಹಲ ಮೂಡಿಸುತ್ತಿದೆ. ಯಾರು ಅಧಿಕಾರ ಗದ್ದುಗೆ ಹಿಡಿಯುತ್ತಾರೋ, ಮತದಾರ ಪ್ರಭು ಯಾರಿಗೆ ಜೈ ಅಂತಾನು ಗೊತ್ತಿಲ್ಲ. ಆದರೆ ಪ್ರತಿಯೊಂದು ಪಕ್ಷಿಗಳು ಕೂಡ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಹಿತ ಸಿದ್ದರಾಮಯ್ಯ ಕೂಡ ಮುಂದಿನ ಚುನಾವಣೆಯಲ್ಲಿ ಅಧಿಕಾರ ಹಿಡಿಯೋದು ಖಚಿತ ಎಂದು ಹೇಳಿದ್ದಾರೆ.
ಹೌದು ಮೂರು ಪಕ್ಷಗಳು ಕೂಡ ಮತದಾರರನ್ನು ಹೋಲಿಸಲು ಒಂದಲ್ಲ ಒಂದು ಕಾರ್ಯಕ್ರಮಗಳು ಮಾಡುತ್ತಿದ್ದು, ಪೂರ್ವ ದಿಕ್ಕಿನಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ, ನಾವು ಅಧಿಕಾರಕ್ಕೆ ಬರುವುದು ಕೂಡ ಅಷ್ಟೇ ಸತ್ಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ಬದಲಾವಣೆಯಾದರೆ ರಾಜ್ಯದಲ್ಲೇ ಬದಲಾವಣೆ ಆಗುತ್ತದೆ. ಮಂಡ್ಯದಲ್ಲಿ ಕನಿಷ್ಠ 5-6 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಿಸಬೇಕು. ನಾವು ಅಧಿಕಾರಕ್ಕೆ ಬರುವುದು ಸತ್ಯ. ಅದಕ್ಕೆ ನೀವೂ ಕೂಡ ನಮ್ಮ ಜೊತೆಗಿರಬೇಕು ಎಂದು ಮನವಿ ಮಾಡಿದ್ದಾರೆ.
![]() |
![]() |
![]() |
![]() |
![]() |
[ays_poll id=3]