ರಾಯಚೂರು : ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿರನ್ನಾಗಿ ಪರಿಗಣಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.
ಗ್ರಾಚ್ಯುಟಿ ಪಾವತಿಸಲು ಕೂಡಲೇ ಸರ್ಕಾರ ನಿರ್ದೇಶನ ನೀಡಬೇಕು.ಅಂಗನವಾಡಿ ಕೇಂದ್ರಗಳಲ್ಲಿಯೇ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಪ್ರಾರಂಭಿಸಬೇಕು.
ಏಪ್ರೀಲ್ 25 ರಂದು ಸುಪ್ರೀಂ ಕೋರ್ಟ್ 1972 ರ ಗ್ರಾಚ್ಯುಟಿ ಕಾಯ್ದೆಯ ಪ್ರಕಾರ ಅಂಗನವಾಡಿ ನೌಕರರು ಗ್ರಾಚ್ಯುಟಿ ಪಡೆಯಲು ಅರ್ಹರು ಎಂಬ ಐತಿಹಾಸಿಕ ತೀರ್ಪ ನೀಡಿದೆ.ಇದರ ಪ್ರಕಾರ ರಾಜ್ಯದಾದ್ಯಂತ ಸಾವಿರಾರು ನಿವೃತ್ತಿ ನೌಕರರು ಸಿಡಿಪಿಒ,ಡಿ.ಡಿ. ನಿರ್ದೇಶಕರು ಮತ್ತು ಪ್ರಧಾನ ಕಾರ್ಯದರ್ಶಿಗಳಿಗೆ ಅರ್ಜಿಯನ್ನು ಸ್ವತಃ ಹಾಗೂ ಅಂಚೆ ಮುಖಾಂತರ ಸಲ್ಲಿಸಿದ್ದಾರೆ.ಆದರೆ ಕೆಲವೆಡೆ
ಸಿಡಿಪಿಒ,ಡಿ.ಡಿ.ನಿರ್ದೇಶಕರು ಮತ್ತು ಪ್ರಧಾನ ಕಾರ್ಯದರ್ಶಿಗಳು ಅರ್ಜಿಗಳನ್ನು ತೆಗೆದು ಕೊಳ್ಳಲು ಕೆಲವೆಡೆ ನಿರಾಕರಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ 48 ವರ್ಷಗಳ ಇತಿಹಾಸದಲ್ಲಿ ಬಂದಂತಹ ಒಂದು ಸವಲತ್ತನ್ನು ಪಡೆಯಲು ಬೇಕಾದ ದಾಖಲಾತಿಗಳನ್ನು ಹೊಂದಿಸಿ ಕೊಳ್ಳಲು ಬಿಡದ ಇಲಾಖೆಯ ವ್ಯವಸ್ಥೆಯನ್ನು ಸರಿಪಡಿಸಬೇಕು. ಗ್ರಾಚ್ಯುಟಿಗೆ ಸಲ್ಲಿಸಿರುವ ಅರ್ಜಿದಾರರಿಗೆ ಕೂಡಲೇ ಪರಿಹಾರ ನೀಡಲು ರಾಜ್ಯ ಸಚಿವ ಸಂಪುಟ ಆದೇಶಿಸಬೇಕು. ಅನ್ನದೊಟ್ಟಿಗೆ ಅಕ್ಷರ ಕೇಂದ್ರವಾಗಿ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಿ, ಬಲಿಷ್ಠ ಪಡಿಸಬೇಕು. ಐಸಿಡಿಎಸ್ ಮಾರ್ಗದರ್ಶಿ ಸೂಚಿಗಳ ಪ್ರಕಾರ ಇರುವ 6 ಸೇವೆಗಳಿಗೆ ಮಾತ್ರ ಅಂಗನವಾಡಿ ನೌಕರರನ್ನು ಬಳಸಬೇಕು ಎಂದು ಒತ್ತಾಯಿಸಿದರು.
ಅಂಗನವಾಡಿ ಕೇಂದ್ರದ ವೇಳಾಪಟ್ಟಿ ಬದಲಾಗಬೇಕು.ಉಚಿತ ಕೆಲಸ ನಿಲ್ಲಿಸಿ ಸಮಯಕ್ಕೆ ಸರಿಯಾಗಿ ವೇತನ ಪಾವತಿಸಬೇಕು. ನ್ಯಾಯಯುತ ಮುಂಬಡ್ತಿಗಳನ್ನು ಕೊಡಲು ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಹೆಚ್.ಪದ್ಮಾ,ರಂಗಮ್ಮ ಅನ್ವರ,ವರಲಕ್ಷ್ಮಿ ಡಿ.ಎಸ್.ಶರಣಬಸವ ಸೇರಿದಂತೆ ಇತರರು ಉಪಸ್ಥಿತರಿದ್ದರು.
![]() |
![]() |
![]() |
![]() |
![]() |
[ays_poll id=3]