This is the title of the web page
This is the title of the web page
Local News

ಕಲುಷಿತ ನೀರು ಸೇವನೆ ಪ್ರಕರಣ : ಸಿಇಒಗೆ ನೋಟಿಸ್‌


ರಾಯಚೂರು : ಕಲುಷಿತ ನೀರು ಸೇವಿಸಿ ಓವ೯ ಬಾಲಕ ಮೃತಪಟ್ಟು, 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶುದ್ಧ ಕುಡಿಯುವ ನೀರು ಪೂರೈಕೆಯಲ್ಲಿ ನಿರ್ಲಕ್ಷ್ಯ ವಹಿಸಿದ ಗ್ರಾಮ ಪಂಚಾಯಿಗಳ ವಿರುದ್ಧ ಕ್ರಮ ಕೈಗೊಳ್ಳದ ಜಿಲ್ಲಾ ಪಂಚಾಯಿತಿ ಸಿಇಒಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್‌ ನೀಡಿದೆ.

ಹೌದು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೋರೆಬಾಳ ಹಾಗೂ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ಗ್ರಾಮಸ್ಥರು ಅಸ್ವಸ್ಥ ಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಜನರ ಆರೋಗ್ಯ ದೃಷ್ಟಿಯಿಂದ ಶುದ್ಧ ನೀರು ಪೂರೈಕೆ ಮಾಡುವುದು ಹಾಗೂ ನೀರಿನ ಮೂಲಗಳಾದ ಕೊಳವೆ ಬಾವಿ, ಕೆರೆ, ಬಾವಿ ಹಾಗೂ ಹಳ್ಳಗಳ ನೀರು ಕಲುಷಿತವಾಗದಂತೆ ನೋಡಿಕೊಳ್ಳುವುದು ಅವಶ್ಯಕ. ಆದರೆ, ಜಲ ಕಾಯ್ದೆ 1974ರ ಸೆಕ್ಷನ್‌ 24, 25 ರ ಪ್ರಕಾರ ಜಲಮೂಲಗಳನ್ನು ಕಲುಷಿತಗೊಳಿಸುವುದು ಶಿಕ್ಷಾರ್ಹ ಅಪರಾಧ. ಹೀಗಾಗಿ ಘಟನೆಯಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳ ವಿರುದ್ಧ ಈವರೆಗೆ ಏಕೆ ಕ್ರಮ ಕೈಗೊಳ್ಳಬಾರದು ಎಂಬುವುದಕ್ಕೆ 7 ದಿನಗಳೊಳಗೆ ಸಮಾಜಾಯಿಷಿ ನೀಡಿ ಎಂದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ್ ಕುರೇರ ಅವರಿಗೆ ನೋಟಿಸ್‌ ನೀಡಲಾಗಿದೆ.


[ays_poll id=3]