
K2 ನ್ಯೂಸ್ ಡೆಸ್ಕ್ : ಸರ್ಕಾರಿ ಶಾಲೆಯೇ, ಸರ್ಕಾರಕ್ಕೆ ನಕಲಿ ದಾಖಲೆಗಳನ್ನು ಸೃಷ್ಟಿಸಿ, 300 ಕೋಟಿ ರೂಪಾಯಿ ಪಂಗನಾಮ ಹಾಕಿರುವ ಘಟನೆ ಬಿಹಾರ ರಾಜ್ಯದಲ್ಲಿ ಬೆಳಕಿಗೆ ಬಂದಿದೆ.
ಬಿಹಾರದ ಸರಕಾರಿ ಶಾಲೆಗಳಲ್ಲಿ ಐದು ಲಕ್ಷ ವಿದ್ಯಾರ್ಥಿಗಳು ಓದುತ್ತಿದ್ದಾರೆ ಅಂತ ದಾಖಲೆಯನ್ನು ಸರ್ಕಾರಿ ಅಧಿಕಾರಿಗಳು ತಯಾರಿಸಿ ಸರ್ಕಾರಕ್ಕೆ ಸಲ್ಲಿಸಿ, ವರ್ಷಕ್ಕೆ 300 ಕೋಟಿ ರೂಪಾಯಿ ಪಡೆದಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಸಮಸ್ಯೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ತನಿಖೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಪ್ರಕರಣದ ಕುರಿತು ವಿಚಾರಣೆ ನಡೆಸಿದ ಅಧಿಕಾರಿಗಳಿಗೆ, ಸರ್ಕಾರಿ ಶಾಲೆಗಳಲ್ಲಿ 5 ಲಕ್ಷ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದು, ವಾರ್ಷಿಕ 300 ಕೋಟಿ ರೂ. ಖರ್ಚಾಗುತ್ತಿದೆ ಎಂದು ಬಿಲ್ ತೋರಿಸಿರುವುದು ತನಿಖೆ ವೇಳೆ ತಿಳಿದು ಬಂದಿದೆ. ಶಾಲೆಗಳಿಗೆ ದಿಢೀರ್ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಈ ಅಕ್ರಮ ಬಯಲಾಗಿದೆ. ಶಾಲೆಯಲ್ಲಿ ಇಲ್ಲದ ಎಲ್ಲ ವಿದ್ಯಾರ್ಥಿಗಳ ಹೆಸರನ್ನು ದಾಖಲೆಯಿಂದ ತೆಗೆದು ಸರಿಪಡಿಸಲಾಗಿದೆ ಎಂದು ಬಿಹಾರ ಶಿಕ್ಷಣ ಇಲಾಖೆ ಮುಖ್ಯ ಕಾರ್ಯದರ್ಶಿ ಕೆ.ಕೆ. ಪಾಠಕ್ ತಿಳಿಸಿದ್ದಾರೆ.
![]() |
![]() |
![]() |
![]() |
![]() |
[ays_poll id=3]