This is the title of the web page
This is the title of the web page
Local NewsState

ಸೈಕ್ಲೋನ್ ಎಫೆಕ್ಟ್.. ರಾಯಚೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ


K2 ನ್ಯೂಸ್ ಡೆಸ್ಕ್ : ಬಿರು ಬೇಸಿಗೆಯಲ್ಲಿ ರಾಜ್ಯಕ್ಕೆ ಸೈಕ್ಲೋನ್ ಭೀತಿ ಕಾಡುತ್ತಿದೆ. ಕಳೆದ ಎರಡು ಮೂರು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದ್ದು ರಾಯಚೂರಿನಲ್ಲಿ ಕೂಡ ಮೋಡಕವಿದ ವಾತಾವರಣದಿಂದ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ.

ಹವಾಮಾನ ಇಲಾಖೆಯ ವರದಿ ಪ್ರಕಾರ ಮುಂದಿನ ನಾಲ್ಕು ದಿನ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ, ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ, ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಹಾವೇರಿ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಇತರ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಅವಮಾನ ಇಲಾಖೆ ತಿಳಿಸಿದೆ.


[ays_poll id=3]