ರಾಯಚೂರು : ಹಾಸ್ಟೆಲ್ ಹೊರಗುತ್ತಿಗೆ ಕಾರ್ಮಿಕರ ಪ್ರಥಮ ರಾಜ್ಯ ಮಟ್ಟದ ಸಮ್ಮೇಳನವನ್ನು ಡಿಸೆಂಬರ್ 17,18 ರಂದು ಎರಡು ದಿನಗಳ ಕಾಲ ಮೈಸೂರಿನ ಮಹಾರಾಜ ಕಾಲೇಜು, ಶತಮಾನೋತ್ಸವ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ ಹೇಳಿದರು.
ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸಾವಿರಾರು ಹಾಸ್ಟೆಲ್ ಕಾರ್ಮಿಕರಿಂದ ಬೃಹತ್ ಮೆರವಣಿಗೆ ನಡೆಯಲಿದೆ. 17ರಂದು ಬೆಳಿಗ್ಗೆ ಬಹಿರಂಗ ಅಧಿವೇಶನ, ಮಹಾರಾಜ ಕಾಲೇಜಿನಲ್ಲಿ ಶತಮಾನೋತ್ಸವ ಭವನದಲ್ಲಿ ನಡೆಯಲಿದೆ. ಅದೇ ದಿನ ಸಂಜೆಯಿಂದ ಡಿಸೆಂಬರ್ 18ರ ಸಂಜೆಯವರೆಗೆ ಅಧಿವೇಶನ ನಡೆಯಲಿದೆ. ಈ ಅಧಿವೇಶನದಲ್ಲಿ ಸುಮಾರು 400 ಜನ ಪ್ರತಿನಿಧಿ ಗಳು ಭಾಗವಹಿಸಲಿದ್ದಾರೆ ಎಂದರು. ಕರಡು ಮುಖ್ಯ ಗೊತ್ತುವಳಿ, ಸಂಘಟನಾತ್ಮಕ ಕೊರತೆ ಹಾಗೂ ಹೊರಗುತ್ತಿಗೆ ಪದ್ಧತಿ ರದ್ದುಪಡಿಸಿ, ಸರ್ಕಾರವೇ ವೇತನ ಸಹಿತ ಶಾಸನಬದ್ಧ ಸೌಕರ್ಯಗಳನ್ನು ನೀಡಬೇಕೆಂದು ಅಗ್ರಹಿಸಿ ಮಂಡನೆಯಾಗುವ ಗೊತ್ತುವಳಿಗಳ ಮೇಲೆ ಚರ್ಚೆಗಳು ನಡೆಯಲಿವೆ.
ನಂತರ ಮುಂದಿನ ಹೋರಾಟದ ರೂಪರೇಷಗಳನ್ನು ನಿರ್ಣಯಿಸಲಾಗುವುದು ಮತ್ತು ಘೋಷಣೆ ಮಾಡಲಾಗುವುದು ಎಂದರು. ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳು ಮತ್ತು ಹೊರಗುತ್ತಿಗೆ ಏಜೆನ್ಸಿಗಳಿಂದ ತೀವ್ರ ಶೋಷಣೆಗೆ ಆಗಿರುವ ಹಾಸ್ಟೆಲ್ ಹೊರಗುತ್ತಿಗೆ ಕಾರ್ಮಿಕರಿಗೆ ಸೇವಾ ಭದ್ರತೆಯು ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಹಲವಾರು ವರ್ಷಗಳಿಂದ ನಿರಂತರವಾಗಿ ಹೋರಾಟಗಳನ್ನು ಬಳಸಿಕೊಂಡು ಬಂದಿರುವ ಸಂಘವು ಹಲವಾರು ಮೈಲುಗಲ್ಲು ಯಶಸ್ವಿಗಳನ್ನು ಗಳಿಸಿದೆ ಎಂದರು.
![]() |
![]() |
![]() |
![]() |
![]() |
[ays_poll id=3]