This is the title of the web page
This is the title of the web page
Politics News

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮ ಗೊಳಿಸಲು ಡೇಟ್ ಫಿಕ್ಸ್


K2 ಪೊಲಿಟಿಕಲ್ ನ್ಯೂಸ್ : 2023ರ ವಿಧಾನಸಭಾ ಚುನಾವಣೆಗೆ. ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳ ಅಂತಿಮ ಮಾಡಲು ಡೇಟ್ ಫಿಕ್ಸ್ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿದ್ದಾರೆ.

ರಾಜ್ಯದ 224 ಕ್ಷೇತ್ರಗಳಿಗೂ ಅಭ್ಯರ್ಥಿಗಳ ಬಗ್ಗೆ ಚರ್ಚಿಸಲು ಕೆಪಿಸಿಸಿ ಚುನಾವಣಾ ಸಮಿತಿ ಸಭೆಯನ್ನು ಫೆ.2ರಂದು ಕರೆಯಲಾಗಿದೆ. ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿದ ಬಳಿಕ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಎಐಸಿಸಿಗೆ ಕಳುಹಿಸಲಾಗುವುದು, ಈ ಬಾರಿ ಅಭ್ಯರ್ಥಿಗಳನ್ನು ಬೇಗ ಘೋಷಿಸಲಾಗುವುದು. ಫೆ.2ರಂದು ಪಟ್ಟಿ ಬಹುತೇಕ ಅಂತಿಮಗೊಳ್ಳಲಿದೆ ಎಂದು ಡಿಕೆಶಿ ಹೇಳಿದ್ದಾರೆ.


31
Voting Poll