
K2 ನ್ಯೂಸ್ ಡೆಸ್ಕ್ : ವಿಧಾನಸಭೆ ಚುನಾವಣೆಗೆ ದಿನಗಳು ಹತ್ತಿರವಾಗುತ್ತಿರುವಂತೆ ಚುನಾವಣ ಆಯೋಗವೂ ಸಿದ್ಧತೆಗಳನ್ನು ಚುರುಕುಗೊಳಿಸಿದ್ದು, ಮೇ 2ನೇ ವಾರದ ಲೆಕ್ಕಾಚಾರ ಇರಿಸಿಕೊಂಡಿದೆ.
ರಾಜ್ಯದಲ್ಲಿ ಮೇ 2ನೇ ವಾರದಲ್ಲಿ ವಿಧಾನಸಭೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ ಎಂದು ವರದಿಯಾಗಿದೆ. ಹಾಲಿ ವಿಧಾನಸಭೆ ಅವಧಿ ಮೇ 24ಕ್ಕೆ ಕೊನೆಗೊಳ್ಳಲಿದ್ದು ಅಷ್ಟರೊಳಗೆ ಚುನಾವಣೆ ನಡೆಯಬೇಕು. 2018ರಲ್ಲಿಯೂ ಮೇ 12ಕ್ಕೆ ಮತದಾನವಾಗಿದ್ದು, ಈ ಬಾರಿಯೂ ಅದೇ ಸಮಯದಲ್ಲಿ ಮತದಾನ ನಡೆಸುವುದಕ್ಕೆ ಆಯೋಗ ಲೆಕ್ಕಾಚಾರ ಹಾಕಿಕೊಂಡಿದೆ. ಅಂತಿಮ ಮತದಾರರ ಪಟ್ಟಿ ಸಿದ್ಧಪಡಿಸಿಕೊಂಡಿರುವ ಆಯೋಗ ಈಗ EVMಗಳ ಮೊದಲ ಹಂತದ ತಪಾಸಣೆ ಕಾರ್ಯ ಕೂಡ ಆರಂಭಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
![]() |
![]() |
![]() |
![]() |
![]() |
[ays_poll id=3]