
ರಾಯಚೂರು : ಸರ್ಕಾರದಿಂದ ಬಡವರಿಗಾಗಿ ಪಡಿತರ ಕಾರ್ಡ್ ಮೂಲಕ ಆಹಾರಧಾನ್ಯ ನೀಡಲಾಗುತ್ತಿದ್ದು ಅದನ್ನು ಮಾರಾಟ ಮಾಡುವುದಾಗಲಿ ಅಥವಾ ಮಾರಾಟಕ್ಕೆ ಸಂಗ್ರಹಣೆ ಮಾಡುವುದು ಕಂಡುಬಂದಲ್ಲಿ ಅಂತಹ ಪಡಿತರ ಚೀಟಿಯನ್ನು ಆರು ತಿಂಗಳ ಅವಧಿಗೆ ಅಮಾನತುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಲ್. ಚಂದ್ರಶೇಖರ ನಾಯಕ ಎಚ್ಚರಿಕೆ ನೀಡಿದ್ದಾರೆ.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯ ಪ್ರತಿ ಅಂತ್ಯೋದಯ (ಎಎವೈ) ಪಡಿತರ ಚೀಟಿಗೆ 14 ಕೆ.ಜಿ ಜೋಳ ಮತ್ತು 21 ಕೆ.ಜಿ ಸಾರವರ್ಧಿತ ಅಕ್ಕಿ ಮತ್ತು ಪಿ.ಎಚ್.ಎಚ್(ಬಿಪಿಎಲ್) ಪಡಿತರ ಚೀಟಿಯಲ್ಲಿನ ಪ್ರತಿ ಫಲಾನುಭವಿಗೆ 2 ಕೆ.ಜಿ ಜೋಳ ಮತ್ತು 3 ಕೆ.ಜಿ ಸಾರವರ್ಧಿತ ಅಕ್ಕಿ ಹಾಗೂ ಪಿ.ಎಚ್.ಎಚ್ (ಬಿಪಿಎಲ್) ಪಡಿತರ ಚೀಟಿಯಲ್ಲಿನ ಪ್ರತಿ ಸದ್ಯಸರಿಗೆ ಹೆಚ್ಚುವರಿಯಾಗಿ 1 ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಒಂದು ವೇಳೆ ಈ ಒಂದು ಆಹಾರ ಧಾನ್ಯಗಳನ್ನು ಮಾರಾಟ ಮಾಡುವುದಕ್ಕಲಿ ಅಥವಾ ಸಂಗ್ರಹಿಸುವುದಾಗಲಿ ಮಾಡಿದಲ್ಲಿ, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ವಿತರಿಸಲಾದ ಕಾನೂನು ಕ್ರಮ ಕೈಗೊಳ್ಳಲಾಗುವುದು, ಪಡಿತರ ಚೀಟಿದಾರರಿಗೆ ವಿತರಿಸಲಾದ ಆಹಾರ ಧಾನ್ಯಗಳಿಗೆ ಮುಕ್ತ ಮಾರುಕಟ್ಟೆ ದರಕ್ಕೆ ದಂಡ ವಿಧಿಸಿ ಆರು ತಿಂಗಳವರೆಗೆ ಪಡಿತರ ಚೀಟಿ ಅಮಾನತುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
![]() |
![]() |
![]() |
![]() |
![]() |
[ays_poll id=3]