ಝೀಕಾ ವೈರಸ್ ಹರಂಡಂತೆ ಸೂಕ್ತ ಕ್ರಮ ಕೈಗೊಳ್ಳಿ: ಡಿ.ಸಿ.ಎಲ್ ಚಂದ್ರಶೇಖರ ನಾಯಕ
![]() |
![]() |
![]() |
![]() |
![]() |
ರಾಯಚೂರು : ಜಿಲ್ಲೆಯಲ್ಲಿ ಝೀಕಾ ವೈರಸ್ ಲಕ್ಷಣಗಳು ಕಂಡುಬರುತ್ತಿದ್ದು, ಈ ವೈರಸ್ ಹೆಚ್ಚಾಗಿ ಹರಡಂತೆ ಮುಂಜಾಗೃತಾ ಕ್ರಮವಾಗಿ ಎಲ್ಲಾ ರೀತಿಯ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ್ ನಾಯಕ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಝೀಕಾ ವೈರಸ್‍ಗೆ ಸಂಬಂಧಪಟ್ಟಂತೆ ಆರೋಗ್ಯ ಇಲಾಖೆ ಹಾಗೂ ಇನ್ನಿತರ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯ, ಜಿಲ್ಲೆಯ ಮಾನವಿ ತಾಲೂಕಿನ ನೀರಮಾನ್ವಿ ಗ್ರಾಮದ ಕೋಳಿ ಕ್ಯಾಂಪ್ ಎನ್ನುವ ಪ್ರದೇಶದಲ್ಲಿ ಈಗಾಗಲೇ ಒಬ್ಬ ಬಾಲಕನಲ್ಲಿ ಝೀಕಾ ವೈರಸ್ ಕಂಡುಬಂದಿದ್ದು, ಸೊಳ್ಳೆಗಳಿಂದಲೇ ಈ ವೈರಸ್ ಅತ್ಯಂತ ವೇಗವಾಗಿ ಹರಡುವುದರಿಂದ ಗ್ರಾಮದಲ್ಲಿ ಹಾಗೂ ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮಗಳಲ್ಲಿ ಜನರು ಸ್ವಚ್ಛತೆ ಹಾಗೂ ನೀರು ನಿಲ್ಲದಂತೆ ನೋಡಿಕೊಳ್ಳುವಂತೆ ಕ್ರಮ ಕೈಗೊಳ್ಳಬೇಕು ಎಂದರು. ನೀರಮಾನವಿಯ ಕೋಳಿ ಕ್ಯಾಂಪ್ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಎಲ್ಲಾ ಗ್ರಾಮಗಳಲ್ಲಿ ಜನರ ರಕ್ತದ ಮಾದರಿಗಳನ್ನು ಸಂಗ್ರಹಿಸಬೇಕು ಹಾಗೂ ಈ ಗ್ರಾಮಗಳಲ್ಲಿ ಸೊಳ್ಳೆಗಳು ಹೆಚ್ಚಾಗದಂತೆ ಫಾಗಿಂಗ್ ಮಾಡಿಸುವಂತೆ ಸೂಚನೆ ನೀಡಿದರು.
ಇದೇ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು ಮಾತನಾಡಿ, ಆರೋಗ್ಯ ಸಚಿವರ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರ ಆದೇಶದಂತೆ ಝೀಕಾ ವೈರಸ್ ಹರಡಂತೆ ಜಿಲ್ಲೆಯಲ್ಲಿ ಎಲ್ಲಾ ರೀತಿಯ ಸೂಕ್ತ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ, ಒಂದು ವೇಳೆ ಹೆಚ್ಚಿನ ಜ್ವರ ಕಂಡುಬಂದಲ್ಲಿ ಹಾಗೂ ಗರ್ಭಿಣಿ ಮಹಿಳೆಯರಲ್ಲಿ ಹೆಚ್ಚಿನ ಜ್ವರ ಕಂಡುಬಂದಲ್ಲಿ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.
![]() |
![]() |
![]() |
![]() |
![]() |