K2kannadanews.in
terrible landslide ಕೇರಳ : ರಕ್ಕಸ ಮಳಿಯಿಂದಾಗಿ ಭೀಕರ ಭೂಕುಸಿತವಾಗಿದೆ, ಭೂಕುಸಿತದಿಂದಾಗಿ ಒಂದು ಗ್ರಾಮವೇ ಮುಳುಗಿದೆ ಎಂದು ಹೇಳಲಾಗುತ್ತಿದೆ. ಮೃತ ದೇಹಗಳು ನದಿಯಲ್ಲಿ ತೇಲಿ ಬರುತ್ತಿವೆ.
ಹೌದು ಬೆಚ್ಚಿ ಬೀಳಿಸುವ ಭೂಕುಸಿತಕ್ಕೆ ಕೇರಳ ಅಕ್ಷರಶಃ ತತ್ತರಿಸಿದೆ. ಇಂದು ಬೆಳಿಗ್ಗೆ ಅಟ್ಟಮಾಲಾ ಮುಂಡಕ್ಕೈ, ಚೂರಲ್ಮಲಾ ಮತ್ತು ನೂಲ್ಪುಝಾ ಗ್ರಾಮದಲ್ಲಿ ಭೂಕುಸಿತ ಆಗಿದೆ. ಒಟ್ಟು ಮೂರು ಕಡೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ಭಾರೀ ಸಾವು ನೋವು ಸಂಭವಿಸಿದೆ. ಮುಂಡಕ್ಕೈ ಮತ್ತು ಚೂರಲ್ಮಲಾ ಪ್ರದೇಶವು ಅಕ್ಷರಶಃ ಗುರುತೇ ಸಿಗದಂತಾಗಿದೆ. ಉಕ್ಕಿ ಹರಿಯುತ್ತಿರುವ ನೀರಿನಲ್ಲಿ ಹೆಣಗಳು ತೇಲಿ ಬರುತ್ತಿದ್ದು, ದೇವರ ನಾಡು ರಕ್ಕಸ ಮಳೆಯಾರ್ಭಟಕ್ಕೆ ಸ್ಮಶಾನವಾಗಿದೆ.
ಸುಮಾರು ಏಳು ಅಡಿಯಷ್ಟು ಭೂಕುಸಿತದ ಮಣ್ಣು ಸಂಗ್ರಹವಾಗಿದೆ ಎಂದು ಹೇಳಲಾಗುತ್ತಿದೆ. ಪರಿಣಾಮ ಮರಗಳು, ಮಣ್ಣು, ಮನೆಗಳು ತೊಯ್ದಿದ್ದು, ಸ್ಥಳದಲ್ಲಿ ರಕ್ಷಣಾ ತಂಡಗಳು ಕಾರ್ಯ ನಿರ್ವಹಿಸುತ್ತಿವೆ. ಅಗ್ನಿಶಾಮಕ ದಳ, ಎನ್ಡಿಆರ್ಎಫ್ ಮತ್ತು ಸ್ಥಳೀಯ ತಂಡಗಳು ಸೇರಿ ಸುಮಾರು 250 ಜನರು ರಕ್ಷಣೆ ಮಾಡಲು ಮುಂದಾಗಿದ್ದಾರೆ. ಭೀಕರ ಭೂಕುಸಿತದಲ್ಲಿ ಸಾವನ್ನಪ್ಪಿದವರ ಮೃತದೇಹಗಳು ನದಿಯಲ್ಲಿ ತೇಲಿ ಹೋಗುತ್ತಿವೆ. 200ಹೆಚ್ಚು ಮನೆಗಳು ಭೂ ಕುಸಿತಕ್ಕೆ ಹಾನಿಯಾಗಿವೆ ಎಂದು ಹೇಳಲಾಗುತ್ತಿದೆ.