This is the title of the web page
This is the title of the web page
State News

ಕಲುಷಿತ ನೀರು ಕುಡಿದು ಸಾವು – ಸಿಎಂ ಭೇಟಿ, ಪರಿಹಾರದ ಭರವಸೆ ಘಟನೆ ವರದಿ ನೀಡಲು ಸಚಿವ ಎನ್.ಎಸ್ ಬೋಸರಾಜು ಸೂಚನೆ


ರಾಯಚೂರು : ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಹಾಗೂ ಗೊರೆಬಾಳ ಗ್ರಾಮದಲ್ಲಿ ವಿಷಪೂರಿತ ಆಹಾರ, ಕಲುಷಿತ ನೀರು ಕುಡಿದು ಅಸ್ವಸ್ಥರಾಗಿರುವವರಿಗೆ ಸೂಕ್ತ ಚಿಕಿತ್ಸೆ ನೀಡಿ ಮುಂಜಾಗ್ರತೆ ಕ್ರಮವನ್ನು ವಹಿಸಬೇಕು ಅಲ್ಲದೇ ಜಿಲ್ಲೆಯ ಜನರಿಗೆ ಸರಬರಾಜಾಗುವ ಕುಡಿಯುವ ನೀರನ್ನು ಪರಿಶೀಲಿಸಿ ವರದಿ ನೀಡುವಂತೆ ಸಚಿವರಾದ ಎನ್.ಎಸ್ ಬೋಸರಾಜು ಅವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡ ಘಟನೆಗೆ ತಿಳಿದ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗಿದೆ. ಅಲ್ಲದೆ ಇಂದು ಬೆಳಗ್ಗೆ ಪರಸ್ಥಿತಿ ತಿಳಿದು ಈಗಾಗಲೆ ಅಸ್ವಸ್ಥರಾಗಿರುವವರಿಗೆ ಜಿಲ್ಲಾ ರಿಮ್ಸ್ ಆಸ್ಪತ್ರೆಯಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೂಕ್ತ ಚಿಕಿತ್ಸೆ ನೀಡಲು ಜಿಲ್ಲಾ ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಾಗೂ ಡಿಹೆಚ್ಓ ಅವರಿಗೆ ದೂರವಾಣಿ ಮುಖಾಂತರ ಮಾತನಾಡಿ ಸೂಚನೆ ನೀಡಿದರು.

ರೇಖಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟ ಮಗುವಿಗೆ ಸರ್ಕಾರದಿಂದ ಪರಿಹಾರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನಕ್ಕೆ ತರಲಾಗಿದೆ. ಜಿಲ್ಲೆಯಾದ್ಯಂತ ಇರುವ ಶುದ್ಧ ಕುಡಿಯುವ ನೀರಿನ ಘಟಕಗಳ ವಾಸ್ತವ ಸ್ಥಿತಿ ಪರಿಶೀಲಿಸಿ ತಾಂತ್ರಿಕ ದೋಷದಿಂದ ಸ್ಥಗಿತಗೊಂಡ ಘಟಕಗಳನ್ನು ಜಿಲ್ಲಾಡಳಿತ ಶೀಘ್ರ ದುರಸ್ತಿ ಮಾಡಿ ಕುಡಿಯುವ ನೀರು ಸರಬರಾಜು ಮಾಡಬೇಕು. ಮತ್ತೊಮೆ ಇಂತಹ ಘಟನೆ ಮರುಕಳಿಸದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳ ಬೇಕೆಂದು ಸೂಚನೆ ನೀಡಿದ್ದಾರೆ.


[ays_poll id=3]