This is the title of the web page
This is the title of the web page
Crime NewsVideo News

ತರಗತಿಗೆ ವಿದ್ಯಾರ್ಥಿನಿಯನ್ನು ಹುಡುಕಿಕೊಂಡು ಬಂದ ಮೃತ್ಯು..!


K2 ನ್ಯೂಸ್ ಡೆಸ್ಕ್ : ಶಾಲೆಯಲ್ಲಿ ತರಗತಿ ನಡೆಯುತ್ತಿದ್ದ ವೇಳೆಯಲ್ಲಿ ವಿದ್ಯಾರ್ಥಿಗಳಿಗೆ ಹೃದಯಘಾತವಾಗಿ ಕುಣಿತ ಬೆಂಚಿನಲ್ಲಿಯೇ ಮೃತಪಟ್ಟಿರುವ ಘಟನೆ ಸೂರತ್ನಲ್ಲಿ ನಡೆದಿದೆ.

ಗುಜರಾತ್​ನ ಸೂರತ್​ನ ಶಾಲೆಯೊಂದರಲ್ಲಿ ಬೆಂಚ್​ ಮೇಲೆ ಕುಳಿತಿದ್ದ12 ವರ್ಷದ ಎಂಟನೇ ತರಗತಿ ವಿದ್ಯಾರ್ಥಿನಿ ರಿದ್ಧಿ ಮೇವಾಡ ದಿಢೀರನೆ ನೆಲಕ್ಕೆ ಬಿದ್ದಿದ್ದಾಳೆ. ಕೂಡಲೇ ಶಿಕ್ಷಕರು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರು ಬಾಲಕಿಯ ತಪಾಸಣೆ ನಡೆಸಿದ್ದಾರೆ. ದುರಾದೃಷ್ಟವಶಾತ್ ಅಷ್ಟರಲ್ಲಗಲೇ ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ತರಗತಿಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಆಗಿದೆ. ಮಗಳ ಹಠಾತ್ ಸಾವಿನಿಂದ ಕುಟುಂಬಸ್ಥರು ಆಘಾತಗೊಂಡಿದ್ದಾರೆ. ಈ ಘಟನೆ ತರಗತಿಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ತರಗತಿಯಲ್ಲಿದ್ದ ಎಲ್ಲರಿಗೂ ಆಘಾತವನ್ನುಂಟು ಮಾಡಿದೆ. ಘಟನೆಯ ಕುರಿತು ಪೊಲೀಸರು ಅನಿರೀಕ್ಷಿತ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


[ays_poll id=3]