
K2 ನ್ಯೂಸ್ ಡೆಸ್ಕ್ : ಬೆಂಗಳೂರಿನ ನೆಟ್ಟಿಗೆರೆ ಬಳಿ ವ್ಯಕ್ತಿ ಓರ್ವ ಕಾರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆಗೆ ಟ್ವಿಸ್ಟ್ ಸಿಕ್ಕಿದ್ದು, ಆತ್ಮಹತ್ಯೆಗೂ ಮುಂಚೆ ವ್ಯಕ್ತಿ ಡೆತ್ ನೋಟಿನಲ್ಲಿ ಅರವಿಂದ ಲಿಂಬಾವಳಿ ಸೇರಿ ಆರು ಜನ ಪ್ರಮುಖ ರಾಜಕಾರಣಿಗಳ ಹೆಸರು ಬರೆದಿಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ.
ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಹೆಸರು ಬರೆದಿಟ್ಟು ವ್ಯಕ್ತಿಯೊಬ್ಬರು ಕಾರಿನಲ್ಲೇ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೆಟ್ಟಿಗೆರೆ ಬಳಿ ನಡೆದಿದೆ. ಹೆಚ್‌ಎಸ್ಆರ್ ಲೇಔಟ್ ನಿವಾಸಿ ಪ್ರದೀಪ್ (47) ಆತ್ಮಹತ್ಯೆ ಮಾಡಿಕೊಂಡವರು.
ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್‌ನಲ್ಲಿ, ಮಹದೇವಪುರ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಒಟ್ಟು 6 ಪ್ರಭಾವಿ ರಾಜಕಾರಣಿಗಳ ಹೆಸರನ್ನು ಬರೆದಿಟ್ಟು ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
![]() |
![]() |
![]() |
![]() |
![]() |
[ays_poll id=3]