This is the title of the web page
This is the title of the web page
Local News

ಡಿ.24:ಪ್ರತಿಭಾ ಪುರಸ್ಕಾರ,ಸನ್ಮಾನ ಸಮಾರಂಭ


ರಾಯಚೂರು : ಜಿಲ್ಲಾ ಸವಿತಾ ಸಮಾಜ ನೌಕರರ ಸಂಘದ ವತಿಯಿಂದ ಡಿಸೆಂಬರ್ 24 ರಂದು ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕಾ.ಸ ಸದಸ್ಯ ವಿಜಯ ಭಾಸ್ಕರ ಇಟಗಿ ಹೇಳಿದರು.

ನಗರದ ಬಾಬು ಜಗಜೀವನರಾಂ ಕಲ್ಯಾಣ ಮಂಟಪದಲ್ಲಿ ಸಮಾರಂಭ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಗದಗ ವಿಶ್ವವಿದ್ಯಾಲಯ ಗ್ರಾಮೀಣ ಮತ್ತು ಪಂಚಾಯತ್ ಅಭಿವೃದ್ಧಿ ಕುಲಪತಿ ವಿಷ್ಣುಕಾಂತ ಚಟಪಲ್ಲಿ ಅವರು ಮಾಡಲಿದ್ದಾರೆ. ಕಾರ್ಯಕ್ರಮ ಅಧ್ಯಕ್ಷತೆಯನ್ನು ಜಿಲ್ಲಾ ಸವಿತಾ ಸಮಾಜ ನೌಕರರ ಸಂಘದ ಅಧ್ಯಕ್ಷ ಆರ್ .ನಾಗರಾಜ್ ವಯ್ಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಶಿವರಾಜ್ ಪಾಟೀಲ್, ಮಾಜಿ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜ, ನಗರ ಸಭೆಯ ಅಧ್ಯಕ್ಷ ಲಲಿತಾ ಕಡಗೋಲ್ ಅಂಜಿನೇಯ್ಯ, ನಗರಾಭಿವೃದ್ಧಿ ಪ್ರಾಧಿಕಾರಾಧ್ಯಕ್ಷ ತಿಮ್ಮಪ್ಪ ನಾಡಗೌಡ, ಸವಿತಾ ಸಮಾಜದ ಜಿಲ್ಲಾಧ್ಯಕ್ಷ ವಿಜಯ ಭಾಸ್ಕರ್ ಇಟಗಿ, ಅಶೋಕಗಸ್ತಿ ಫೌಂಡೇಶನ್ ಅಧ್ಯಕ್ಷ ಸಿಮಾ ಅಶೋಕ ಗಸ್ತಿ,ಎಸ್.ಎಸ್.ಆರ್.ಜಿ ಮಹಿಳಾ ಮಹಾವಿದ್ಯಾಲಯ ಪ್ರಾಚಾರ್ಯ ಸತ್ಯ ನಾರಾಯಣ ಅವರು ಭಾಗವಹಿಸಲಿದ್ದಾರೆ ಎಂದರು.


[ays_poll id=3]