
ರಾಯಚೂರು : ಚಳಿಗಾಲ ಅಧಿವೇಶನ ಮುಕ್ತಾಯಗೊಳ್ಳುವ ಒಳಗೆ ಸರಕಾರ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ವರದಿಯನ್ನು ಸದನದಲ್ಲಿ ಮಂಡಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡದಿದ್ದರೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಮುಂದುವರಿಸಿ ಮುಂಬರುವ ವಿಧಾನಸಭೆ ಚುನಾವಣೆಯನ್ನು ಎದುರಿಸಲು ತೀರ್ಮಾನಿಸಲಾಗುತ್ತದೆ ಎಂದು ಪರಿಶಿಷ್ಟ ಜಾತಿಗಳ ಮೀಸಲಾತಿ ಜಾರಿ ಹೋರಾಟ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಮಾರಪ್ಪ ಹೇಳಿದರು.
ನ್ಯಾಯಮೂರ್ತಿ ಎಚ್.ಎನ್ ನಾಗಮೋಹನ್ ದಾಸ್ ವರದಿ ಆಧಾರಿತ ಶೇಕಡ 17 ರಲ್ಲಿ ಒಳ ಮೀಸಲಾತಿ ಸೂತ್ರವನ್ನು ಕೇಂದ್ರವು ಸಂವಿಧಾನದ 9ನೇ ಶೆಡ್ಯೂಲ್ ಗೆ ಸೇರಿಸಿದ ನಂತರ ಜಾತಿ ಮಾಡಬೇಕು.ಇಲ್ಲದಿದ್ದರೆ ನ್ಯಾಯಮೂರ್ತಿ ಎಜೆ ಸದಾಶಿವ ವರದಿ ಶೇಕಡ 15ರಲ್ಲಿ ಒಳ ಮೀಸಲಾತಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಬೇಕೆಂದು ಅಗ್ರಹಿಸಿದರು.
ಡಿ.26 ರಂದು ಮಾಜಿ ಉಪ ಮುಖ್ಯಮಂತ್ರಿ ಜಿ ಪರಮೇಶ್ವರ್ ಅವರು ಹೋರಾಟದ ವೇದಿಕೆಗೆ ಸ್ವಯಂಪೂರ್ತಿಯಿಂದ ಆಗಮಿಸಿ ಹೋರಾಟ ಬೆಂಬಲ ಸೂಚಿಸಿ 8-1-2023 ರಂದು ನಡೆಯುವ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಸಮಾವೇಶದಲ್ಲಿ ಅವಳ ಮೀಸಲಾತಿ ಬಗ್ಗೆ ತೀರ್ಮಾನ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ ಎಂದರು. ಹೋರಾಟದ ಸಮಯದಲ್ಲಿ ಪೊಲೀಸರು ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿ 10 ಜನರ ಮೇಲೆ ಪ್ರಕರಣ ದಾಖಲಿಸಿರುವುದು ಖಂಡನೀಯ.
![]() |
![]() |
![]() |
![]() |
![]() |
[ays_poll id=3]