This is the title of the web page
This is the title of the web page
Local News

ಪ್ಲಾಸ್ಟಿಕ್ ಧ್ವಜ ನಿಷೇಧ ಕ್ರಮಕ್ಕೆ ಆಗ್ರಹ


ರಾಯಚೂರು : ರಾಷ್ಟ್ರೀಯ ಹಬ್ಬದ ಸಮಯದಲ್ಲಿ ರಾಷ್ಟ್ರಧ್ವಜದ ಅಪಮಾನವನ್ನು ತಡೆಗಟ್ಟಲು ನ್ಯಾಯಾಲಯದ ಆದೇಶದಂತೆ ಮತ್ತು ಕೇಂದ್ರ ಸರಕಾರದ ಪ್ಲಾಸ್ಟಿಕ್ ನಿಷೇಧದ ನಿರ್ಧಾರದಂತೆ ಕ್ರಮ ಕೈಗೊಳ್ಳುವಂತೆ ಹಿಂದೂ ಜಾಗೃತಿ ಸಮತಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ರಾಷ್ಟ್ರಧ್ವಜವು ರಾಷ್ಟ್ರದ ಭಾವೈಕ್ಯದ ಸಂಕೇತವಾಗಿದೆ. ಆಗಸ್ಟ್ 15 ಮತ್ತು ಜನವರಿ 26 ರಂದು, ರಾಷ್ಟ್ರ ಧ್ವಜವನ್ನು ಹೆಮ್ಮೆಯಿಂದ ಪ್ರದರ್ಶಿಸಲಾಗುತ್ತದೆ. ಆದರೆ ಅದೇ ದಿನ, ಅದೇ ಕಾಗದದ ಪ್ಲಾಸ್ಟಿಕ್‌ನ ಸಣ್ಣ ಸಣ್ಣ ರಾಷ್ಟ್ರಧ್ವಜಗಳು ರಸ್ತೆಗಳು, ಆಸೆ ಮತ್ತು ಚರಂಡಿಗಳಲ್ಲಿ ಹರಿದ ಸ್ಥಿತಿಯಲ್ಲಿ ಅದ್ದಿರುವುದು ಕಂಡುಬರುತ್ತದೆ. ಪ್ಲಾಸ್ಟಿಕ್ ಧ್ವಜಗಳು ಬೇಗನೇ ನಾಶವಾಗುವುದಿಲ್ಲ. ಆದ್ದರಿಂದ ಅನೇಕ ದಿನಗಳವರೆಗೆ ಈ ರಾಷ್ಟ್ರಧ್ವಜಗಳ ಅವಮಾನವನ್ನು ನೋಡಬೇಕಾಗುತ್ತದೆ. ರಾಷ್ಟ್ರಧ್ವಜದ ಈ ಅವಮಾನವನ್ನು ತಡೆಯಲು ಹಿಂದೂ ಜನಜಾಗೃತಿ ಸಮಿತಿಯು ಮುಂಬೈ ಉಚ್ಚ ನ್ಯಾಯಾಲಯದಲ್ಲ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸಲ್ಲಿಸಿತ್ತು.

ಈ ಕುರಿತು ವಿಚಾರಣೆ ನಡೆಸಿದಾಗ, ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜದ ಅಪಮಾನವನ್ನು ನಿಲ್ಲಸುವಂತೆ ನ್ಯಾಯಾಲಯವು ಸರಕಾರಕ್ಕೆ ಆದೇಶ ನೀಡಿತ್ತು. ಅದರಂತೆ ಕೇಂದ್ರ ಮತ್ತು ರಾಜ್ಯ ಗೃಹ ಇಲಾಖೆಗಳು ಮತ್ತು ಶಿಕ್ಷಣ ಇಲಾಖೆಗಳು ಈ ಸಂಬಂಧ ಸುತ್ತೋಲೆಯನ್ನೂ ಹೊರಡಿಸಿದ್ದವು. ಇದರೊಂದಿಗೆ ಕೇಂದ್ರ ಸರಕಾರವೂ ಪ್ಲಾಸ್ಟಿಕ್ ನಿಷೇಧಿಸಲು ನಿರ್ಧರಿಸಿದೆ. ಅದರ ಪ್ರಕಾರವೂ ಪ್ಲಾಸ್ಟಿಕ್ ರಾಷ್ಟ್ರಧ್ವಜ ಮಾರಾಟ ಮಾಡುವುದು ಸಂವಿಧಾನಬಾಹಿರವಾಗಿದೆ. ಜಿಲ್ಲೆಯಲ್ಲಿ ಪ್ಲಾಸ್ಟಿಕ್ ನಿಷೇದವನ್ನು ತಡೆಗಟ್ಟುವಂತೆ ಒತ್ತಾಯಿಸಿದರು.


[ays_poll id=3]