
K2 ಪೊಲಿಟಿಕಲ್ ನ್ಯೂಸ್ : ದೇಶದಲ್ಲಿ ಮೋದಿ 10 ವರ್ಷಗಳಿಂದ ಅಧಿಕಾರ ನಡೆಸುತ್ತಿದ್ದಾರೆ. ಮೋದಿ ಪ್ರಧಾನಿಯಾದ ಬಳಿಕ ದೇಶದಲ್ಲಿ ಬಡವರ ವಿನಾಶವಾಗುತ್ತಿದೆ ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಆರೋಪಿಸಿದ್ದಾರೆ.
ಚಿಕ್ಕಬಳ್ಳಾಪುರದ ಕೆ.ವಿ.ಕ್ಯಾಂಪಸ್ ನ ಕೈ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿ, ಮೋದಿ ಹೇಳಿದಂತೆ ಸಬ್ ಕಾ ವಿಕಾಸ್ ಆಗುತ್ತಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಲವ್ ಜಿಹಾದ್, ಘರ್ ವಾಪಸಿ ಎಂದು ಕರೆ ನೀಡುತ್ತಿದ್ದಾರೆ. ಇವರಿಗೆ ದೇಶದ ಅಭಿವೃದ್ಧಿ ಬೇಕಿಲ್ಲ. ಕೈಯಲ್ಲಿ ಚಾಕು, ಚೂರಿ ಹಿಡಿಯುವಂತೆ ಯುವಕರಿಗೆ ಪ್ರಚೋದನೆ ನೀಡುತ್ತಿದ್ದಾರೆಂದು ಕಿಡಿಕಾರಿದರು. ಅಲ್ಲದೆ ರಾಜ್ಯದಲ್ಲಿ ಮತ್ತು ದೇಶದಲ್ಲಿ ಬಡವರ ವಿನಾಶವಾಗಿದೆ ಎಂದು ಅಸಮಾಧಾನ ಹೊರ ಹಾಕಿದರು.
![]() |
![]() |
![]() |
![]() |
![]() |
[ays_poll id=3]