K2kannadanews.in
Crime News ದೇವದುರ್ಗ : ಹಟ್ಟಿ ಚಿನ್ನದ ಗಣಿ ಕಂಪನಿ ನೀಡಿದ ಸಿಎಸ್‌ಆರ್ ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪ ಸಾಬೀತಾದ ಹಿನ್ನೆಲೆ ದೇವದುರ್ಗ ಬಿಇಓ ಸುಖದೇವ ಎಚ್. ಅವರನ್ನು ಶನಿವಾರ ಇಲಾಖೆ ಅಮಾನತು ಮಾಡಿ ಆದೇಶ ಹೊರಡಿಸಿದೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕು ಬಿಇಓ ಅಮಾನತ್ತಾಗಿದ್ದು, ಊಟಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ, ಹಟ್ಟಿ ಚಿನ್ನದ ಗಣಿ ಕಂಪನಿ ನೀಡಿದ್ದ, ಸಿಎಸ್‌ಆರ್ 30 ಲಕ್ಷ ಅನುದಾನ ದುರುಪಯೋಗಪಡಿಸಿಕೊಂಡ ಕುರಿತು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಕಾಂಗ್ರೆಸ್ ಮುಖಂಡ ಟಿ. ಸುರೇಶನಾಯಕ ಅವರು ದೂರು ನೀಡಿದ್ದರು. ದೂರು ಆಧರಿಸಿ ತನಿಖೆ ಕೈಗೊಂಡು ವರದಿ ನೀಡುವಂತೆ ಕಲಬುರಗಿ ವಿಭಾಗದ ಹೆಚ್ಚುವರಿ ಆಯುಕ್ತರಿಗೆ ಸೂಚಿಸಲಾಗಿತ್ತು. ಪ್ರಾಥಮಿಕ ವಿಚಾರಣೆ ವರದಿಯಲ್ಲಿ ಹಣಕಾಸು ದುರ್ಬಳಕೆ, ಭ್ರಷ್ಟಾಚಾರ, ಕರ್ತವ್ಯ ಲೋಪ ಮತ್ತು ಸೇವಾ ನಿರ್ಲಕ್ಷ್ಯ ಸಾಬೀತಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.