
K2 ನ್ಯೂಸ್ ಡೆಸ್ಕ್ : ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ 600 ಕೆಜಿ ಮಾವಿನ ಹಣ್ಣುಗಳನ್ನು ಉಡುಗೊರೆಯಾಗಿ ಕಳುಹಿಸಿದ್ದಾರೆ.
ಹಸೀನಾ ಅವರು ಈಶಾನ್ಯದ ಎಲ್ಲಾ ಮುಖ್ಯಮಂತ್ರಿಗಳಿಗೂ ಮಾವಿನ ಹಣ್ಣುಗಳನ್ನು ಕಳುಹಿಸಿದ್ದಾರೆ. ಕಳೆದ ವರ್ಷ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಪಶ್ಚಿಮ ಬಂಗಾಳ, ತ್ರಿಪುರಾ ಮತ್ತು ಅಸ್ಸಾಂ ಮುಖ್ಯಮಂತ್ರಿಗಳಿಗೆ ಮಾವಿನ ಹಣ್ಣುಗಳನ್ನು ಉಡುಗೊರೆಯಾಗಿ ಕಳುಹಿಸಿದ್ದರು.
ʻಹಿಂಸಾಗರ್ʼ ಹಾಗೂ ʻಲಂಗ್ರಾʼ ತಳಿಯ ಮಾವಿನ ಹಣ್ಣುಗಳನ್ನು ಉಡುಗೊರೆಯಾಗಿ ಕಳುಹಿಸಿಕೊಟ್ಟಿದ್ದಾರೆ. ಕಳೆದ ವರ್ಷ ಸಹ ಮಾವಿನ ಹಣ್ಣುಗಳನ್ನು ಕಳುಹಿಸಿಕೊಡಲಾಗಿತ್ತು ಎಂದು ಬಾಂಗ್ಲಾದೇಶದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
![]() |
![]() |
![]() |
![]() |
![]() |
[ays_poll id=3]